ಬೇತಮಂಗಲ: ಹೋಬಳಿಯ ಎನ್.ಜಿ.ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂದೋಡಹಳ್ಳಿ ಗ್ರಾಮದಲ್ಲಿ ಶುಕ್ರವಾರ ನೀರಿನ ಅದಾಲತ್ ಸಭೆ ನಡೆಯಿತು.

ಈ ವೇಳೆ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಆಡಳಿತಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ, ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ, ಗ್ರಾಮಗಳ ಮೂಲಭೂತ ಸೌಕರ್ಯಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.

ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಈಗಾಗಲೇ ಗ್ರಾಮಗಳಲ್ಲಿನ ಶುದ್ಧ ಕುಡಿವ ನೀರಿನ ಘಟಕಗಳನ್ನು ದುರಸ್ತಿ ಪಡಿಸಲಾಗಿದೆ. ಸಮರ್ಪಕ ನೀರಿನ ಸರಬರಾಜುಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು ಎಂದರು.

ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಬೀದಿ ದೀಪಗಳನ್ನು ಅಳವಡಿಸಲು ಸೂಚಿಸಲಾಗಿದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಗ್ರಾಮದ ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲಾಗುವುದು ಎಂದು ತಿಳಿಸಿದರು.

ಜೆಜೆಎಂ ಯೋಜನೆಯಡಿ ಗ್ರಾಮದಲ್ಲಿ ಪೈಪ್ಲೈನ್ ಅಳವಡಿಸಲು ಎಲ್ಲ ರಸ್ತೆಗಳನ್ನು ಕತ್ತರಿಸಲಾಗಿದ್ದು, ಇದರಿಂದ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹಾಗಾಗಿ ಸಂಬಂಧಪಟ್ಟ ಗುತ್ತಿಗೆದಾರರು ತಕ್ಷಣವೇ ರಸ್ತೆ ದುರಸ್ತಿಗೊಳಿಸಬೇಕೆಂದು ಒತ್ತಾಯಿಸಿ ಗಂದೋಡಹಳ್ಳಿ ಗ್ರಾಮಸ್ಥರು ವೆಂಕಟೇಶಪ್ಪ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ವೆಂಕಟೇಶಪ್ಪ ಅವರು, ಈ ಕುರಿತು ತಕ್ಷಣವೇ ಸಂಬಂಧಪಟ್ಟ ಎಂಜಿನಿಯರ್ ಹಾಗೂ ಗುತ್ತಿಗೆದಾರರೊಂದಿಗೆ ಮಾತನಾಡಿ ರಸ್ತೆಗಳನ್ನು ಶೀಘ್ರ ದುರಸ್ತಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಎಸ್ಡಿಎ ಸುನಿಲ್ ರೆಡ್ಡಿ, ಕರ ವಸೂಲಿಗಾರ ವೆಂಕಟರಾಮಪ್ಪ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-18-545158306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.