ಕೋಲಾರ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಲ್ಲೂಕಿನ ಹರಟಿ ಗ್ರಾಮದ ಬಾಲಕಿ ಶನಿವಾರ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಗ್ರಾಮದ ಎಂ.ಕವಿತಾ (14) ಮೃತ ಬಾಲಕಿ. ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

9ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಗ್ರಾಮದಲ್ಲಿ ಅತ್ತೆ, ಮಾವ ಸಾಕುತ್ತಿದ್ದರು. ಆಕೆ ಗುರುವಾರ (ಮೇ 14) ಬೆಳಿಗ್ಗೆ ಮನೆಯಿಂದ ನಾಪತ್ತೆಯಾಗಿದ್ದಳು. ಈ ಸಂಬಂಧ ಬಾಲಕಿಯನ್ನು ಹುಡುಕಿಕೊಡಿ ಎಂದು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಅಲ್ಲದೆ, ಪಕ್ಕದ ಮನೆಯ ಆನಂದ್ ಎಂಬ ಯುವಕನ ಮೇಲೆ ಅನುಮಾನ ವ್ಯಕ್ತಪಡಿಸಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಮಧ್ಯೆ, ಗ್ರಾಮದ ಹೊರವಲಯದ ಕೃಷಿ ಹೊಂಡದಲ್ಲಿ ಗುರುವಾರ ಬೆಳಿಗ್ಗೆ ಬಾಲಕಿ ಶವ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಸಾವಿನ ಬಗ್ಗೆ ಕವಿತಾ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬಾಲಕಿ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆನಂದ ಎಂಬ ಯುವಕನನ್ನು ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಬಾಲಕಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಎರಡು ಕುಟುಂಬಗಳ ಮಧ್ಯೆ ಗಲಾಟೆ ಕೂಡ ನಡೆದಿದೆ ಎಂಬುದು ಗೊತ್ತಾಗಿದೆ.

ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಸಹ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶವ ಹೊರ ತೆಗೆದಿದ್ದು, ಕೋಲಾರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಯಲ್ಲಿ ಬಾಲಕಿಯ ಶವ ಪರೀಕ್ಷೆ ನಡೆಸಲಾಯಿತು.

‘ಅತ್ಯಾಚಾರ ಮಾಡಿ, ಬೆದರಿಕೆ ಹಾಕಿರುವ ಕಾರಣ ಕವಿತಾ ಆತ್ಮಹತ್ಯೆ ಮಾಡಿಕೊಂಡಿರಬಹುದು. ಇಲ್ಲವೇ ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ಇದೆ’ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆ ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-18-271893813

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.