ಕೋಲಾರ: ಜಾಗತಿಕ ತಾಪಮಾನದ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಮನ್ವಂತರ ಪ್ರಕಾಶನ, ಮನ್ವಂತರ ಮಾಧ್ಯಮ ಕೌಶಲಾಭಿವೃದ್ಧಿ ತರಬೇತಿ ಸಂಸ್ಥೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ಸಂವಾದ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಂ.ಆರ್.ರವಿ ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಅವರು 'ಗ್ರಾಮೀಣ ಪರಿಸರ ಸಂರಕ್ಷಣೆ' ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಸಸಿ ವಿತರಿಸಲಿದ್ದಾರೆ.

ತಾಪಮಾನದ ಕುರಿತು ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಿ.ವಿ.ಗೋಪಿನಾಥ್ ಬಹುಮಾನ ವಿತರಿಸಲಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ. 90ರಷ್ಟು ಅಂಕ ಗಳಿಸಿದ ಅಂಗವಿಕಲ ವಿದ್ಯಾರ್ಥಿ ಕೆ.ಸಿ. ಚರಣ್ ಅವರನ್ನು ಸನ್ಮಾನಿಸಲಾಗುತ್ತದೆ. ಕೆ.ಎಸ್.ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಮನ್ವಂತರ ಪ್ರಕಾಶನದ ಗೌರವ ಅಧ್ಯಕ್ಷ ಎಸ್.ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎ.ಜಿ.ಸುರೇಶ್ ಕುಮಾರ್ ಪಾಲ್ಗೊಳ್ಳುವರು. ಪರಿಸರ ಸಂರಕ್ಷಣೆಯ ಆಶಯದೊಂದಿಗೆ ಲೇಖಕ ಎಚ್.ಎ.ಪುರುಷೋತ್ತಮ ರಾವ್ ಸಸಿ ವಿತರಿಸಲಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪಾ.ಶ್ರೀ.ಅನಂತರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-18-224527154

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.