ಬೇತಮಂಗಲ: ಗ್ರಾಮ ಪಂಚಾಯಿತಿ ವ್ಯವಸ್ಥೆಯನ್ನು ಪ್ರಜಾಪ್ರಭುತ್ವದ ಅಡಿಪಾಯವೆಂದೇ ಪರಿಗಣಿಸಲಾಗುತ್ತದೆ. ಗ್ರಾಮ ಪಂಚಾಯಿತಿಗಳ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡು ಸುಮಾರು 5–6 ತಿಂಗಳು ಕಳೆದಿದೆ. ಆದಾಗ್ಯೂ, ಈವರೆಗೆ ಚುನಾವಣೆ ದಿನಾಂಕ ಘೋಷಣೆಯಾಗದಿರುವುದು ಗ್ರಾಮೀಣ ಭಾಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಜನಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಆಡಳಿತಾಧಿಕಾರಿಗಳು ಆಡಳಿತ ನಡೆಯುತ್ತಿರುವುದರಿಂದ ಸ್ಥಳೀಯ ಮಟ್ಟದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮ ಪಂಚಾಯಿತಿಗೆ ಆಯ್ಕೆಯಾಗುವ ಸದಸ್ಯರು ಸ್ಥಳೀಯರೇ ಆಗುವುದರಿಂದ ಅವರು ಜನರಿಗೆ ಸುಲಭವಾಗಿ ಲಭ್ಯವಾಗುತ್ತಿದ್ದರು. ಹೀಗಾಗಿ, ಅವರ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಜನರು ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಆದರೆ, ಸರ್ಕಾರಿ ಅಧಿಕಾರಿಗಳು ಹೆಚ್ಚುವರಿಯಾಗಿ ಆಡಳಿತಾಧಿಕಾರಿಯಾಗಿ ಹೆಚ್ಚುವರಿ ಜವಾಬ್ದಾರಿ ನಿಭಾಯಿಸುತ್ತಿರುವ ಕಾರಣ ಅವರಿಗೆ ಹಳ್ಳಿಯ ಸಮಸ್ಯೆಗಳನ್ನು ಅರಿಯಲು ಸಮಯದ ಅಭಾವವಿರುತ್ತದೆ. ಜೊತೆಗೆ ಜನಸಾಮಾನ್ಯರಿಗೆ ಆಡಳಿತಾಧಿಕಾರಿಗಳು ಸುಲಭಕ್ಕೆ ಸಿಗುವುದಿಲ್ಲ. ಇದರಿಂದಾಗಿ ತಮ್ಮ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಾರೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಪ್ರತಿನಿಧಿಗಳು ಇಲ್ಲದ ಕಾರಣ ಗ್ರಾಮಸಭೆಗಳ ಮೂಲಕ ಕ್ರಿಯಾಯೋಜನೆ ಸಿದ್ಧಪಡಿಸಿ, ಅನುಮೋದನೆ ಪಡೆಯುವ ಪ್ರಕ್ರಿಯೆ ನಿಧಾನವಾಗುತ್ತಿದೆ. ಇದರಿಂದ ಕುಡಿಯುವ ನೀರು, ರಸ್ತೆ ದುರಸ್ತಿ ಮತ್ತು ಬೀದಿದೀಪಗಳಂಥ ತುರ್ತು ಕೆಲಸಗಳು ಬಾಕಿ ಉಳಿಯುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ.

ಅಧಿಕಾರಶಾಹಿ ಧೋರಣೆ: ಪಂಚಾಯಿತಿಗಳಲ್ಲಿ ಆಡಳಿತಾಧಿಕಾರಿ ಗಳ ನೇಮಕದಿಂದ ಆಡಳಿತವು ಸಂಪೂರ್ಣ ವಾಗಿ ಅಧಿಕಾರಿಗಳ ಹಿಡಿತ ದಲ್ಲಿದೆ. ಇಲ್ಲಿ ಸಾಮಾನ್ಯ ಜನರ ಧ್ವನಿಗಿಂತ ನಿಯಮಗಳಿಗೇ ಹೆಚ್ಚು ಒತ್ತು ಸಿಗುವುದರಿಂದ, ಜನಸಾಮಾನ್ಯರು ಕಚೇರಿಗಳಿಗೆ ಅಲೆಯುವ ಅನಿವಾರ್ಯತೆ ಎದುರಾಗಿದೆ. ಸ್ಥಳೀಯ ಮಟ್ಟದಲ್ಲಿ ಬೆಳೆಯುತ್ತಿರುವ ಯುವ ನಾಯಕತ್ವಕ್ಕೆ ಇದು ಹಿನ್ನಡೆಯಾಗಿದೆ. ಚುನಾವಣೆಯ ಮೂಲಕ ಹೊಸ ನಾಯಕರು ಹೊರಹೊಮ್ಮುವ ಪ್ರಕ್ರಿಯೆ ಸ್ಥಗಿತಗೊಂಡಿದೆ.

ನರೇಗಾ ಯೋಜನೆ ಅಡಿ ಕೆಲಸ ಒದಗಿಸುವುದು ಅಥವಾ ವಸತಿ ಯೋಜನೆಗಳ ಫಲಾನುಭವಿಗಳನ್ನು ಗುರುತಿಸುವಲ್ಲಿ ಸ್ಥಳೀಯ ಸದಸ್ಯರ ಪಾತ್ರ ದೊಡ್ಡದಿರುತ್ತದೆ. ಅದರೆ ಸದಸ್ಯರಿಲ್ಲದ ಕಾರಣ ಅರ್ಹ ಬಡವರಿಗೆ ಸೌಲಭ್ಯಗಳು ತಲುಪುವಲ್ಲಿ ತಾರತಮ್ಯ ಅಥವಾ ವಿಳಂಬವಾಗುವ ಆತಂಕವಿದೆ ಎಂದು ಗ್ರಾಮಸ್ಥರು ಅಲವತ್ತುಕೊಂಡರು.

ಒಟ್ಟಾರೆ, ಗ್ರಾಮ ಪಂಚಾಯಿತಿ ಚುನಾವಣೆಗಳ ವಿಳಂಬವು ಕೇವಲ ರಾಜಕೀಯ ವಿಷಯವಲ್ಲ. ಅದು ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಯ ಪ್ರಶ್ನೆಯಾಗಿದೆ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-18-1051674497

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.