ಕೋಲಾರ: ಜಿಲ್ಲೆಯಲ್ಲಿ ನೂತನವಾಗಿ ಪ್ರಸ್ತಾಪಿಸಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ (ಎಸ್ಟಿಆರ್ಆರ್ 2 ರಿಂದ ಕುಪ್ಪಂ ಸಂಪರ್ಕ) ಹಾಗೂ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಸಂಪರ್ಕ ರಸ್ತೆ ಯೋಜನೆಗಳ ಅಂತಿಮ ಜೋಡಣೆ ಸಂದರ್ಭದಲ್ಲಿ ಜಿಲ್ಲೆಯ ರೈತರ ಹಿತರಕ್ಷಣೆ ಮಾಡಬೇಕು ಹಾಗೂ ಸರ್ವಿಸ್ ರಸ್ತೆ ನಿರ್ಮಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಸಲಹೆ, ಸೂಚನೆ ನೀಡಿದರು.

ಜಿಲ್ಲಾಡಳಿತ ಭವನ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ ಹಾಗೂ ಎಕ್ಸ್ಪ್ರೆಸ್ ವೇ ಕಾರಿಡಾರ್ ಯೋಜನೆಯ ಉನ್ನತ ಮಟ್ಟದ ಮಧ್ಯಸ್ಥಗಾರರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಯೋಜನೆಗಳ ಅನುಷ್ಠಾನ ವೇಳೆ ಪರಿಸರ ಸೂಕ್ಷ್ಮ ವಲಯಗಳ ಸಂರಕ್ಷಣೆ ಮತ್ತು ಕೃಷಿಕರ ಹಿತರಕ್ಷಣೆಗೆ ಮೊದಲ ಆದ್ಯತೆ ನೀಡಬೇಕೆಂದು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (ಎನ್ಎಚ್ಎಐ) ಭಾರಿ ವಾಹನ ದಟ್ಟಣೆ ನಿಯಂತ್ರಣಕ್ಕಾಗಿ ಪ್ರಸ್ತಾಪಿಸಲಾಗಿರುವ ಕುಪ್ಪಂ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಈ ಹಿಂದೆ ಯೋಜಿಸಲಾಗಿದ್ದ ಮಾರ್ಗವು ಕಾಮಸಮುದ್ರಂ ವನ್ಯಜೀವಿ ಧಾಮದ ಪರಿಸರ ಸೂಕ್ಷ್ಮ ವಲಯದ (ಇಎಸ್ಝಡ್) ಮೂಲಕ ಹಾದುಹೋಗುತ್ತಿತ್ತು. ಇದರಿಂದಾಗಿ ಉಂಟಾಗಬಹುದಾದ ಕಾನೂನು ತೊಡಕುಗಳು ಹಾಗೂ ಅರಣ್ಯ ನಾಶವನ್ನು ತಪ್ಪಿಸಲು ಸಭೆಯಲ್ಲಿ ನೂತನ ನಕ್ಷೆಗಳನ್ನು ಪರಿಶೀಲಿಸಲಾಯಿತು.

ವನ್ಯಜೀವಿ ಧಾಮದ ಪ್ರಮುಖ ವಲಯಕ್ಕೆ ಧಕ್ಕೆಯಾಗದಂತೆ, ಪರಿಸರ ಸೂಕ್ಷ್ಮ ವಲಯದಿಂದ ಸಂಪೂರ್ಣ ಹೊರಗುಳಿಯುವ ಬಂಗಾರಪೇಟೆ ಕಡೆಯ ‘ಆಯ್ಕೆ-1’ ಮಾರ್ಗವೇ ಅತ್ಯಂತ ಸೂಕ್ತ ಎಂದು ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟರು. ಆದರೆ, ಈ ಮಾರ್ಗದಲ್ಲಿ ಬರುವ ನೀರಾವರಿ ಹೊಂಡಗಳ ಸಂರಕ್ಷಣೆಗಾಗಿ ಸಣ್ಣ ನೀರಾವರಿ ಇಲಾಖೆಯೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಸೂಕ್ಷ್ಮ ಮಾರ್ಪಾಡುಗಳನ್ನು ಮಾಡಲು ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಯಿತು.

ಆರು ಪಥದ ಹೆದ್ದಾರಿ ನಿರ್ಮಾಣದಿಂದ ಗ್ರಾಮಗಳ ಹಾಗೂ ರೈತರ ಕೃಷಿ ಭೂಮಿಗಳು ವಿಭಜನೆಗೊಳ್ಳುವುದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ಹೆದ್ದಾರಿಯ ಇಕ್ಕೆಲಗಳಲ್ಲಿ ಕಡ್ಡಾಯವಾಗಿ ಕನಿಷ್ಠ 7 ಮೀಟರ್ ಅಗಲದ ಸರ್ವಿಸ್ ರಸ್ತೆಗಳನ್ನು ನಿರ್ಮಿಸಬೇಕು ಎಂದು ಖಡಕ್ ನಿರ್ದೇಶನ ನೀಡಿದರು.

ರೈತರಿಗೆ ತಮ್ಮದೇ ಜಮೀನುಗಳಿಗೆ ಹೋಗಲು ಮುಕ್ತ ಪ್ರವೇಶ ನಿರಾಕರಿಸುವುದು ಅವರ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಈ ಹಿಂದಿನ ಯೋಜನೆಗಳಲ್ಲಿ ಸರ್ವಿಸ್ ರಸ್ತೆಗಳ ಕೊರತೆಯಿಂದಾಗಿ ಎದುರಾಗಿರುವ ನ್ಯಾಯಾಲಯದ ಪ್ರಕರಣಗಳನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ಹೀಗಾಗಿ, ಹೆದ್ದಾರಿಯ ಒಟ್ಟು ಅಗಲವನ್ನು 60 ಮೀಟರ್ಗಳಿಗೆ ನಿಗದಿಪಡಿಸಿ, ಸರ್ವಿಸ್ ರಸ್ತೆಗಳನ್ನು ಅಳವಡಿಸಿಕೊಳ್ಳಬೇಕು" ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹೇಳಿದರು.

ಸಭೆಗೆ ಗೈರುಹಾಜರಾಗಿದ್ದ ಮತ್ತು ಹೆದ್ದಾರಿ ಯೋಜನೆಗೆ ಪೂರಕ ಮಾಹಿತಿ ನೀಡಲು ವಿಳಂಬ ಮಾಡುತ್ತಿರುವ ಕೆಲವು ಇಲಾಖೆಗಳ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆ, ಕಂದಾಯ ಇಲಾಖೆ, ಬೆಸ್ಕಾಂ, ಕೆಪಿಟಿಸಿಎಲ್ ಮತ್ತು ಸಣ್ಣ ನೀರಾವರಿ ಇಲಾಖೆಗಳು ತಕ್ಷಣವೇ ಹೆದ್ದಾರಿ ಪ್ರಾಧಿಕಾರದೊಂದಿಗೆ ಸಮನ್ವಯ ಸಾಧಿಸಿ ಭೂಸ್ವಾಧೀನ ಪ್ರಕ್ರಿಯೆ, ಜಮೀನಿನ ವಿವರಗಳು ಹಾಗೂ ವಿದ್ಯುತ್ ಕಂಬಗಳ ಸ್ಥಳಾಂತರಕ್ಕೆ ಅಗತ್ಯವಿರುವ ವರದಿಗಳನ್ನು ನೀಡಬೇಕು ಎಂದು ಗಡುವು ವಿಧಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ. ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾ ಪ್ರಸಾದ್ ದಿಲೀಪ್, ಮಾಲೂರು ತಹಶೀಲ್ದಾರ್ ರೂಪಾ, ಬಂಗಾರಪೇಟೆ ತಹಶೀಲ್ದಾರ್ ಕೆ.ಎನ್.ಸುಜಾತಾ ಹಾಗೂ ಎನ್ಎಚ್ಎಐ ಯೋಜನಾ ಎಂಜಿನಿಯರ್ಗಳು ಮತ್ತು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-18-292228890

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.