ಕೋಲಾರ: ಹಿಂದೂ ಸಮಾಜೋತ್ಸವ ಸಮಿತಿಯಿಂದ ನಗರದಲ್ಲಿ ಜ.31ರಂದು ಹಮ್ಮಿಕೊಂಡಿರುವ ಹಿಂದೂ ಸಮಾಜೋತ್ಸವ ಸಮಾವೇಶ ಅಂಗವಾಗಿ ಗುರುವಾರ ನಗರದ ವಿವಿಧ ರಸ್ತೆಗಳಲ್ಲಿ ಸಾವಿರಾರು ಮಂದಿ ಬೈಕ್ ರ್ಯಾಲಿ ನಡೆಸಿದರು.

ನಗರದ ಜೂನಿಯರ್ ಕಾಲೇಜು ಮೈದಾನದಿಂದ ಶುರುವಾದ ರ್ಯಾಲಿಯು ಮೆಕ್ಕೆ ವೃತ್ತ, ನಲ್ಲ ಗಂಗಮ್ಮ ದೇವಾಲಯ ವೃತ್ತ, ಕಾಳಮ್ಮದೇವಿ ರಸ್ತೆ, ಹೊಸ ಬಸ್ ನಿಲ್ದಾಣ, ಶಾರದ ಚಿತ್ರಮಂದಿರ, ದೊಡ್ಡಪೇಟೆ ರಸ್ತೆ, ಚಂಪಕ್ ವೃತ್ತ, ಎಂಜಿ ರಸ್ತೆ ಮೂಲಕ ಸಾಗಿ ಮೈದಾನದ ಬಳಿ ಅಂತ್ಯಗೊಂಡಿತು. ಮೆರವಣಿಗೆಯ ಉದ್ದಕ್ಕೂ ಮುಖಂಡರು ಹಿಂದೂ ಸಮಾಜೋತ್ಸವದಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಕೋರಿದರು.

ಮುಖ್ಯ ರಸ್ತೆಗಳಲ್ಲಿ ಸಮಾಜೋತ್ಸವದ ದ್ವಾರ, ಬಸ್ ನಿಲ್ದಾಣ, ಟೇಕಲ್ ರಸ್ತೆ, ಡೂಂ ಲೈಟ್ ವೃತ್ತ ಸೇರಿದಂತೆ ವಿವಿಧೆಡೆ ಕೇಸರಿ ತೋರಣ ಕಟ್ಟಲಾಗಿದೆ. ಸಮಾವೇಶದ ಸ್ವಯಂ ಸೇವಕರು ಮನೆಮನೆಗೆ, ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಕರಪತ್ರ ಹಂಚುತ್ತಿದ್ದಾರೆ.

ಸಮಾಜೋತ್ಸವ ಸಮಿತಿಯ ಸಂಚಾಲಕ ಡಾ.ಜನಾರ್ಧನ್ ಮಾತನಾಡಿ, ‘ಜ.31ರಂದು ಮಧ್ಯಾಹ್ನ 2.30ಕ್ಕೆ ಸಮಾವೇಶ ಹಮ್ಮಿಕೊಳ್ಳಲಾಗಿದೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶೋಭಾ ಯಾತ್ರೆ ನಡೆಯಲಿದೆ. ಇದರಲ್ಲಿ ಸಾವಿವಾರು ಸಂಖ್ಯೆಯಲ್ಲಿ ಹಿಂದೂ ಮುಖಂಡರು ಪಾಲ್ಗೊಳ್ಳಬೇಕು’ ಎಂದು ಕೋರಿದರು.

ರ್ಯಾಲಿಯಲ್ಲಿ ಪಾಲ್ಗೊಂಡಿರುವವರು ಸಮಾವೇಶದ ಉದ್ದೇಶ ಕುರಿತು ಜಾಗೃತಿ ಮೂಡಿಸಬೇಕು. ಸಾವಿರಾರು ಮಂದಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದು ಒಬ್ಬರು ಕನಿಷ್ಠ 10 ಮಂದಿಯನ್ನು ಕರೆ ತರುವ ಮೂಲಕ ಸುಮಾರು 50 ಸಾವಿರ ಜನರನ್ನು ಸೇರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಡಾ.ಶಂಕರ್ ನಾಯಕ್, ವೆಂಕಟೇಶ್, ವರ್ತೂರು ಪ್ರಕಾಶ್, ಸಿಎಂಆರ್ ಶ್ರೀನಾಥ್, ಓಂಶಕ್ತಿ ಚಲಪತಿ, ಪ್ರವಿಣ್, ಗೌಡ, ರಾಜೇಶ್ ಸಿಂಗ್, ನಾರಾಯಣಸ್ವಾಮಿ, ರಾಕೇಶ್, ಬಾಲಾಜಿ ಇದ್ದರು.