ಕೋಲಾರ: ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರ ಈಚೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಮಹಾದೇವ್ ಜೋಶಿ ಶಿಬಿರದ ಉದ್ದೇಶ ಹಾಗೂ ಗ್ರಾಹಕರ ಅರಿವು ಕುರಿತು ವಿವರಿಸಿದರು.

ಬ್ಯಾಂಕ್ನಲ್ಲಿ ಸತತ 10 ವರ್ಷಗಳಿಗೂ ನಿಷ್ಕ್ರಿಯ ಖಾತೆಗಳಲ್ಲಿರುವ ಹಣ ಮತ್ತು 10 ವರ್ಷಗಳಿಗಿಂತ ಹಳೆಯದಾದ ಹಕ್ಕು ಪಡೆಯದ ಠೇವಣಿಗಳನ್ನು ಆರ್ಬಿಐನ ಡಿಇಎ ನಿಧಿಗೆ ವರ್ಗಾಯಿಸಲಾಗುತ್ತದೆ. ಹಕ್ಕು ಪಡೆಯದ ಖಾತೆಗಳು ಮತ್ತು ಠೇವಣಿಗಳ ವಿವರಗಳನ್ನು ವೆಬ್ಸೈಟ್ನಲ್ಲಿ (https://udgam.rbi.org.in) ಪತ್ತೆ ಮಾಡಬಹುದು. ಈ ಶಿಬಿರವು ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಬ್ಯಾಂಕಿಂಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬಂಧಿಸಿದ ಕಚೇರಿ ಶಾಖೆಗಳಲ್ಲಿ ಡಿ.31ರವರೆಗೆ ಮುಂದುವರಿಯುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಹಕ್ಕುಪಡೆಯದೆ ಉಳಿದಿರುವ ಹಣದ ಮೊತ್ತ ₹ 71.21 ಕೋಟಿ. ಹೆಚ್ಚಿನ ಜನಜಾಗೃತಿ ಮೂಡಿಸಲು ವಿಮಾ ಹಾಗು ಬ್ಯಾಂಕ್ಗಳು ಮುಂದೆ, ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಆಳವಡಿಸಬೇಕು ಎಂದರು.

ಆರ್ಬಿಐ ಬೆಂಗಳೂರಿನ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕ ಮೊನಿರಾಜ್ ಬ್ರಹ್ಮ ಮಾತನಾಡಿ, ‘ಗ್ರಾಹಕರಿಗೆ ಬ್ಯಾಂಕ್ನಲ್ಲಿ ಸತತ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿ ಹಕ್ಕುಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವದರ ಬಗ್ಗೆ ಗ್ರಾಹಕರಲ್ಲಿ ಅರಿವು ಮೂಡಿಸಬೇಕು. ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು’ ಎಂದು ಬ್ಯಾಂಕ್ ಮಿತ್ರರರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ರಘುನಾಥರೆಡ್ಡಿ ಮಾತನಾಡಿ, ಕೋಲಾರದಲ್ಲಿ ನಿಷ್ಕ್ರಿಯವಾಗಿರುವ ಸರ್ಕಾರಿ ಖಾತೆಗಳನ್ನು ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ವೈಯಕ್ತಿಕ ಖಾತೆಗಳ ತ್ವರಿತ ವಿಲೇವಾರಿಗಳಿಗಾಗಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು.

ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ, ಕರ್ನಾಟಕ ಬ್ಯಾಂಕ್, ಕರ್ನಾಟಕ ಗ್ರಾಮೀಣ ಬ್ಯಾಂಕ್, ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ, ಕೋಟಕ್ ಮಹೇಂದ್ರ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿ ಬ್ಯಾಂಕ್, ಪಂಜಾಬ್ ಸಿಂದ್ ಬ್ಯಾಂಕ್, ಇಂಡಿಯನ್ ಬ್ಯಾಂಕ್ ಹಾಗೂ ವಿಮಾ ಸಂಸ್ಥೆಯ ಅಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ನ ಬಿ.ಎಸ್.ಆನಂದ್, ಹಣಕಾಸು ಸಲಹೆಗಾರ್ತಿ ವಿಶಾಲಾಕ್ಷಿ, ಕಾರ್ಯಕ್ರಮಕ್ಕೆ ಸಹಯೋಗ ನೀಡಿದರು. ಬ್ಯಾಂಕ್ ಆಫ್ ಬರೋಡಾ ಮುಖ್ಯ ವ್ಯವಸ್ಥಾಪಕ ಮನೋಹರ್ ವಂದಿಸಿದರು.

ವಾರಸುದಾರರಿಗೆ ಬ್ಯಾಂಕ್ ಠೇವಣಿ ಹಸ್ತಾಂತರ ಶಿಬಿರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ನಿಂದ ಆಯೋಜನೆ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರು ಭಾಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.