ಕೋಲಾರ: ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಯಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಖಾಸಗಿ ಆಂಬ್ಯುಲೆನ್ಸ್ ಚಾಲಕ ನಾಗರಾಜ್ ಎಂಬುವರು ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಜುಲೈ 20ರ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಪಾನಮತ್ತರಾಗಿ, ಧೂಮಪಾನ ಮಾಡುತ್ತಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಬಂದು ಖಾಸಗಿ ಅಂಗಾಂಗ ತೋರಿಸಿ ಅನುಚಿತ ವರ್ತನೆ ತೋರಿದ್ದಾರೆ ಎಂದು ದೂರಲಾಗಿದೆ. ಇವರ ವರ್ತನೆಯಿಂದ ಸಿಬ್ಬಂದಿ ಹೆದರಿದ್ದು, ಮುಜುಗರಕ್ಕೆ ಒಳಗಾಗಿದ್ದಾರೆ.

ಕರ್ತವ್ಯದಲ್ಲಿದ್ದ ವೈದ್ಯ ಡಾ.ಕಮಲಾಕರ್ ಅವರ ವರದಿ ಆಧರಿಸಿ ಜಿಲ್ಲಾ ಸರ್ಜನ್ ಡಾ.ಜಗದೀಶ್ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಆಸ್ಪತ್ರೆಗೆ ಬಂದು ಹೋಗಿರುವ ದೃಶ್ಯಗಳು ಆಸ್ಪತ್ರೆಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.