‘ವಿ.ವಿ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಶೇ 94 ರಷ್ಟು ಹಾಗೂ ಖಾಸಗಿ ಕಾಲೇಜುಗಳಲ್ಲಿ ಶೇ 70ರಷ್ಟು ದಾಖಲಾತಿಯಾಗಿದೆ. ಕಲೆ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಕೋರ್ಸ್‌ಗಳಿಗೆ ಲಭ್ಯವಿರುವ ಸೀಟುಗಳಿಗೆ ಮೆರಿಟ್ ಮತ್ತು ಮೀಸಲಾತಿ ಆಧಾರದಲ್ಲಿ ಪ್ರವೇಶ ಪ್ರಕ್ರಿಯೆ ನಡೆಸಲಾಗಿದೆ. ಸಮಾಜ ಕಾರ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಭೌತಶಾಸ್ತ್ರ, ಎಂ.ಕಾಂ ಹಾಗೂ ಗ್ರಂಥಾಲಯ ವಿಜ್ಞಾನ ಕೋರ್ಸ್‌ಗಳಿಗೆ ಶೇ 100ರಷ್ಟು ದಾಖಲಾತಿಯಾಗಿದೆ’ ಎಂದು ವಿವರಿಸಿದರು.