ಕೋಲಾರ: ಜಿಲ್ಲೆಯ ಎಲ್ಲಾ ಕೈಗಾರಿಕೆಗಳು ಮತ್ತು ಸಂಸ್ಥೆಗಳು ಕಡ್ಡಾಯವಾಗಿ ಮಾದಕ ವಸ್ತು ನಿಯಂತ್ರಣ ಆಂತರಿಕ ಸಮಿತಿ ರಚಿಸಬೇಕು ಮತ್ತು ಈ ಸಮಿತಿಗಳು ನಿಯಮಿತವಾಗಿ ಸಭೆ ನಡೆಸಿ ಚರ್ಚಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚಿಸಿದರು.

ಜಿಲ್ಲಾಡಳಿತ ಭವನದ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಸಂಘ ಸಂಸ್ಥೆಗಳು ಹಾಗೂ ಪ್ರಮುಖ ಉದ್ದಿಮೆದಾರರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕೈಗಾರಿಕಾ ವಲಯದಲ್ಲಿ ಮಾದಕವಸ್ತು ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ಸಂಸ್ಥೆಗಳು ತಮ್ಮ ಸ್ವಂತ ನಿಧಿಯಲ್ಲಿ ಸಾರ್ವಜನಿಕ ಜಾಗೃತಿ ಮೂಡಿಸುವ ಕರಪತ್ರಗಳು ಮತ್ತು ಮಾಹಿತಿ ಸಾಮಗ್ರಿಗಳನ್ನು ಸಿದ್ಧಪಡಿಸಿ, ಕಾರ್ಮಿಕರಲ್ಲಿ ನಿರಂತರ ಜಾಗೃತಿ ಮೂಡಿಸಬೇಕು. ಮಾದಕವಸ್ತು ಮುಕ್ತ ಕರ್ನಾಟಕ ನಿರ್ಮಾಣದ ನಿಟ್ಟಿನಲ್ಲಿ ರೂಪಿಸಲಾಗಿರುವ ವಿಶೇಷ ಮೊಬೈಲ್ ಆ್ಯಪ್ ಅನ್ನು ಎಲ್ಲಾ ಉದ್ಯೋಗಿಗಳು ಡೌನ್ಲೋಡ್ ಮಾಡಿಕೊಂಡು ಬಳಸುವಂತೆ ಉತ್ತೇಜಿಸಬೇಕು ಎಂದರು.

ಉದ್ಯೋಗಿಗಳಲ್ಲಿ ಗಾಂಜಾ ಅಥವಾ ಯಾವುದೇ ರೀತಿಯ ಸಂಶ್ಲೇಷಿತ ಮಾದಕವಸ್ತುಗಳ ಬಳಕೆಯ ಲಕ್ಷಣಗಳು ಕಂಡುಬಂದಲ್ಲಿ ಅಥವಾ ಅವರ ನಡವಳಿಕೆಯಲ್ಲಿ ಹಠಾತ್ ಬದಲಾವಣೆಗಳಾಗಿದ್ದಲ್ಲಿ ತಕ್ಷಣವೇ ಗುರುತಿಸಿ, ಆಪ್ತಸಮಾಲೋಚನೆ ಅಥವಾ ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಮಾದಕವಸ್ತು ಮುಕ್ತ ಪರಿಸರ ನಿರ್ಮಾಣಕ್ಕಾಗಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯೊಂದಿಗೆ ಕೈಗಾರಿಕೆಗಳು ನಿರಂತರ ಸಂಪರ್ಕ ಮತ್ತು ಸಮನ್ವಯ ಸಾಧಿಸಬೇಕು. ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕೈಗಾರಿಕಾ ಪ್ರದೇಶಗಳಿಗೆ ಆಕಸ್ಮಿಕ ಭೇಟಿ ನೀಡಲಿದ್ದು, ಉದ್ದಿಮೆದಾರರು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖ ಉದ್ಯೋಗದಾತರು ತಮ್ಮ ಸಂಸ್ಥೆಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ಭದ್ರತಾ ಕ್ರಮಗಳು, ಆಲ್ಕೋಹಾಲ್ ಪತ್ತೆ ಹಚ್ಚುವ ತಪಾಸಣೆಗಳು ಹಾಗೂ ಆಪ್ತಸಮಾಲೋಚನಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಜಿಲ್ಲೆಯನ್ನು ಮಾದಕವಸ್ತು ಮುಕ್ತವಾಗಿಸಲು ಜಿಲ್ಲಾಡಳಿತದೊಂದಿಗೆಕೈಜೋಡಿಸುವುದಾಗಿ ಉದ್ಯಮದ ಪ್ರತಿನಿಧಿಗಳು ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಕನ್ನಿಕಾ ಸಿಕ್ರಿವಾಲ್, ಜಿಲ್ಲೆಯ ಉದ್ದಿಮೆದಾರ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಕಾರ್ಮಿಕ ಇಲಾಖೆಯ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-18-2045240992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.