ಕೋಲಾರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂದೆಕೋರರು ಜಿಲ್ಲೆಯಲ್ಲಿ ಮತ್ತೆ ಬಾಲ ಬಿಚ್ಚುತ್ತಿದ್ದು, ತಿಂಗಳಲ್ಲಿ ಏಳು ಪ್ರಕರಣ ಬೇಧಿಸಿರುವ ಪೊಲೀಸರು 15 ಮಂದಿಯ ಹೆಡೆಮುರಿ ಕಟ್ಟಿದ್ದಾರೆ. ಇನ್ನು ಹಲವರು ತಲೆಮರೆಸಿಕೊಂಡು ದಂಧೆ ಮುಂದುವರಿಸಿದ್ದಾರೆ.

ಹಿಂದೆ ಕೋಲಾರದ ಹಳೆಯ ಪಂಟರ್ಗಳು ಮುಂಬೈ, ಗೋವಾ ಸೇರಿದಂತೆ ವಿವಿಧೆಡೆ ಕುಳಿತು ಕಾರ್ಯಾಚರಣೆ ನಡೆಸುತ್ತಿದ್ದರು. ಈಗ ಆನ್ಲೈನ್ ಮೂಲಕ ಆ್ಯಪ್ಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಜಾಲ ಪತ್ತೆ ಹಚ್ಚುವುದೇ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬೆಟ್ಟಿಂಗ್ ದಂಧೆ ಸಂಘಟಿತ ಅಪರಾಧವಾಗಿರುವ ಕಾರಣ ಬಿಎನ್ಎಸ್ನಡಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ.

ಈ ವರೆಗೆ ವಿವಿಧೆಡೆ ಬೆಟ್ಟಿಂಗ್ನಲ್ಲಿ ತೊಡಗಿದ್ದ 15 ಮಂದಿ ಬಂಧಿಸಿ ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು, ಆರೋಪಿಗಳು ಯಾರ ಯಾರ ಜೊತೆ ಸಂಪರ್ಕ ಹೊಂದಿದ್ದಾರೆ, ಯಾರು ಬಾಜಿ ಕಟ್ಟಿದ್ದಾರೆ ಎಂಬುದನ್ನು ಶೋಧಿಸುತ್ತಿದ್ದಾರೆ. ಆರೋಪಿಗಳು ಆನ್ಲೈನ್ ಮೂಲಕ ಬೇರೆಯವರಿಗೆ ಲಾಗಿನ್ ಐಡಿ ಕೊಟ್ಟು ಬೆಟ್ಟಿಂಗ್ ನಡೆಸುತ್ತಿದ್ದ ಸಂಗತಿ ಗೊತ್ತಾಗಿದೆ.

‘ಬೆಟ್ಟಿಂಗ್ ದಂಧೆಕೋರರು ಆನ್ಲೈನ್ ಬೆಟ್ಟಿಂಗ್ ಆ್ಯಪ್ಲಿಕೇಷನ್ ಲಿಂಕ್ ಕಳಿಸುವುದು, ಆನ್ಲೈನ್ ಬೆಟ್ಟಿಂಗ್ ಐ.ಡಿ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಆನ್ಲೈನ್ನಲ್ಲೇ ಹಣದ ವಹಿವಾಟು ನಡೆಯುತ್ತಿದೆ’ ಎಂದು ನಿಖಿಲ್ ‘ಪ್ರಜಾವಾಣಿ’ಗೆ ತಿಳಿಸಿದರು.

ಮಾರ್ಚ್ 22ರಂದು ಆರಂಭವಾಗಿರುವ ಐಪಿಎಲ್ ಕ್ರಿಕೆಟ್ ಟೂರ್ನಿ ಈಗ ಅಂತಿಮ ಹಂತ ತಲುಪುತ್ತಿದೆ. ದೇಶ ಹಾಗೂ ವಿದೇಶಗಳಲ್ಲಿ ಭಾರಿ ಮೊತ್ತದ ಬೆಟ್ಟಿಂಗ್ ನಡೆಯುತ್ತಿದೆ. ರಾಜ್ಯದಲ್ಲೂ ಜೂಜಾಟ ನಡೆಯುತ್ತಿದ್ದು, ಕೆಲ ಪ್ರಕರಣಗಳನ್ನು ಪೊಲೀಸರು ಬೇಧಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಕೆಲವರು ಬೆಟ್ಟಿಂಗ್ಗಾಗಿ ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳೂ ನಡೆದಿವೆ.

ಕೋಲಾರದಲ್ಲೂ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಹಳೆ ಪಂಟರ್ಗಳು ಹಾಗೂ ಹೊಸ ಪಂಟರ್ಗಳ ಮೇಲೆ ನಿಗಾ ಇಟ್ಟು ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಪೊಲೀಸರಿಗೂ ಸ್ಪಷ್ಟ ಸೂಚನೆ ಕೊಟ್ಟಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಮುಳಬಾಗಿಲು ನಗರದಲ್ಲಿ ಆನ್ಲೈನ್ ಆ್ಯಪ್ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೆನ್) ಪೊಲೀಸರು ಬಂಧಿಸಿದ್ದರು.

ಆರೋಪಿಗಳು ಸಾರ್ವಜನಿಕರಿಂದ ನಗದು ರೂಪದಲ್ಲಿ ಹಾಗೂ ಆನ್ಲೈನ್ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್ಗಳ ಮೂಲಕ ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ನಡೆಸುತ್ತಿದ್ದರು.

ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಕೋಲಾರ ಸೆನ್ ಪೊಲೀಸ್ ಠಾಣೆಗೆ (9480802610) ಮಾಹಿತಿ ನೀಡಲು ಕೋರಿದ್ದಾರೆ. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದೂ ತಿಳಿಸಿದ್ದಾರೆ.

ಹಳೆ ಪಂಟರ್ಗಳ ಮೇಲೆ ನಿಗಾ

‘ಕಳೆದ ವರ್ಷ ಐಪಿಎಲ್ ಬೆಟ್ಟಿಂಗ್ನಲ್ಲಿ ಭಾಗಿಯಾಗಿದ್ದ ಜಿಲ್ಲೆಯ 31 ಮಂದಿ ಹಳೆಯ ಪಂಟರ್ಗಳ ಮೇಲೆ ನಿಗಾ ಇಡಲಾಗಿದೆ. ಅವರನ್ನು ತಹಶೀಲ್ದಾರ್ ಮುಂದೆ ಹಾಜರುಪಡಿಸಿ ₹ 15 ಲಕ್ಷ ಮೊತ್ತದ ಬಾಂಡ್ ಬರೆಸಿಕೊಳ್ಳಲಾಗಿದೆ. ಮತ್ತೆ ಏನಾದರೂ ಬೆಟ್ಟಿಂಗ್ನಲ್ಲಿ ಭಾಗವಹಿಸುವುದು ಕಂಡುಬಂದರೆ ಆ ಹಣ ಜಪ್ತಿ ಮಾಡಿ ಸರ್ಕಾರಕ್ಕೆ ಕೊಡಲಾಗುವುದು. ನಂತರ ಎಫ್ಐಆರ್ ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು. ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಹಿಂಜರಿಯುವುದಿಲ್ಲ’ ಎಂದು ಎಸ್ಪಿ ನಿಖಿಲ್ ಎಚ್ಚರಿಕೆ ನೀಡಿದರು.

ಐಪಿಎಲ್ ಕ್ರಿಕೆಟ್ ಆರಂಭದಿಂದಲೇ ಬೆಟ್ಟಿಂಗ್ ಮೇಲೆ ನಿಗಾ ಇಟ್ಟಿದ್ದೇವೆ. ಕೋಲಾರ, ಮುಳಬಾಗಿಲು, ಶ್ರೀನಿವಾಸಪುರದಲ್ಲಿ ಪ್ರಕರಣಗಳು ಕಂಡುಬಂದಿದ್ದು, ತನಿಖೆ ನಡೆಸುತ್ತಿದ್ದೇವೆ
ನಿಖಿಲ್ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕೋಲಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.