ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜಯಂತ್ಯುತ್ಸವ ಪ್ರಯುಕ್ತ ಜೆಡಿಎಸ್ ಮುಖಂಡರು ಮಂಗಳವಾರ ನಗರದ ನಚಿಕೇತನ ನಿಲಯ ಮತ್ತು ಬಂಗಾರಪೇಟೆ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ‘ಅಂಬೇಡ್ಕರ್ ಭಾರತ ದೇಶದ ಅಸ್ಮಿತೆ. ಅವರು ರಚಿಸಿರುವ ಸಂವಿಧಾನವನ್ನು ಯಾವುದೇ ಕಾರಣಕ್ಕೂ ದುರುಪಯೋಗವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನ ಮೇಲಿದೆ’ ಎಂದರು.

ಸಮಾಜದಲ್ಲಿ ದುರ್ಬಲರು. ಅಸಹಾಯಕರು, ಶೋಷಿತರು ಹಾಗೂ ತುಳಿತಕ್ಕೆ ಒಳಗಾದವರ ಬದುಕಿಗೆ ಬೆಳಕಾಗಿ ಬಂದವರು ಅಂಬೇಡ್ಕರ್. ಅವರು ಇಲ್ಲದಿದ್ದರೆ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಸಂವಿಧಾನ ಸಿಗುತ್ತಿರಲಿಲ್ಲ ಎಂದು ಹೇಳಿದರು.

ಸಂಸದ ಎಂ.ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಡಾ.ಡಿ.ಕೆ.ರಮೇಶ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ನರೇಂದ್ರ ಬಾಬು, ನಗರಸಭೆ ಮಾಜಿ ಉಪಾಧ್ಯಕ್ಷ ವಿ.ಕೆ.ರಾಜೇಶ್, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ರೈತ ಸಂಘದ ಆನಂದ್ ಕುಮಾರ್, ಮುಖಂಡರಾದ ನಾಗರಾಜ್, ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-18-129149945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.