ಕೋಲಾರ: ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ತಾಲ್ಲೂಕಿನ ವಿಟ್ಟಪ್ಪನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದು, ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಟ್ಟಪ್ಪನಹಳ್ಳಿ ಗ್ರಾಮಕ್ಕೆ ಬಂದಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಜಬೀವುಲ್ಲಾ, ಎಂಜಿನಿಯರ್ ಅರವಿಂದ್ ಹಾಗೂ ಗುತ್ತಿಗೆದಾರರಿಗೆ ಲೋಪಗಳನ್ನು ತೋರಿಸಿದ್ದಾರೆ.

ಕೆಲ ದಿನಗಳ ಹಿಂದೆಯೇ ಕಾಮಗಾರಿ ನಿಲ್ಲಿಸಿದ್ದು, ಅಂದಾಜುಪಟ್ಟಿ ಪ್ರಕಾರ ಕಾಮಗಾರಿ ನಡೆಯುತ್ತಿಲ್ಲ, ಪೈಪ್ಗಳು ಮತ್ತು ಇತರೆ ಸಾಮಗ್ರಿಗಳು ಕಳಪೆ ಗುಣಮಟ್ಟದ್ದಾಗಿದೆ ಎಂದು ಆರೋಪಿಸಿದ್ದಾರೆ.

ಕಾಮಗಾರಿ ತಡೆದ ಕಾರಣ ಗುತ್ತಿಗೆದಾರರು ಬೆದರಿಕೆ ಹಾಕಿದ್ದಾರೆ ಎಂದು ಗ್ರಾಮಸ್ಥರು ದೂರಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಎಇಇ ಕಾಮಗಾರಿ ಪರಿಶೀಲನೆ ನಡೆಸಿದ್ದು, ಕಳಪೆ ಕಾಮಗಾರಿ ನಡೆದಿರುವುದು ಪತ್ತೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಅಂದಾಜುಪಟ್ಟಿಯ ಪ್ರಕಾರವೇ ಕಾಮಗಾರಿ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ನಿರ್ಮಾಣವಾಗಿರುವ ಓವರ್ಹೆಡ್ ಟ್ಯಾಂಕ್ ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ದೂರಿದ್ದಾರೆ.

ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಗ್ರಾಮಕ್ಕೆ ಬಂದು ಕಾಮಗಾರಿ ಪರಿಶೀಲನೆ ನಡೆಸುವವರೆಗೆ ಕಾಮಗಾರಿ ಮುಂದುವರಿಸಬಾರದೆಂದು ಗ್ರಾಮಸ್ಥರು ಪಟ್ಟುಹಿಡಿದ ಕಾರಣ ಅಧಿಕಾರಿಗಳು ಹೊರ ನಡೆದರು.

ಈ ಸಂದರ್ಭದಲ್ಲಿ ಹುತ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಎಂಪಿಸಿಎಸ್ ಅಧ್ಯಕ್ಷ ವಿ.ಆರ್.ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೋಟೆ ನಾರಾಯಣಸ್ವಾಮಿ, ವಿ.ಮುನಿರಾಜು, ನಾರಾಯಣಸ್ವಾಮಿ, ಮನೋಹರ್, ರಾಘವೇಂದ್ರ, ಸಂತೋಷ್, ಶಿವರಾಜ್, ನಾರಾಯಣಸ್ವಾಮಿ, ಚಂದ್ರಪ್ಪ, ರಾಜು, ಸುಬ್ಬಣ್ಣ ಹಾಗೂ ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.