ಕೋಲಾರ: ನಗರದ ಮಹಿಳಾ ಸಮಾಜ ಪದವಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ 150ಕ್ಕೂ ಅಧಿಕ ಉದ್ಯೋಗಾಂಕ್ಷಿಗಳು ಪಾಲ್ಗೊಂಡಿದ್ದು, 50 ಉದ್ಯೋಗಾಂಕ್ಷಿಗಳು ಮೌಖಿಕ ಸಂದರ್ಶನ ಎದುರಿಸಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಬಿ.ಕಾಂ, ಬಿಬಿಎ ಹಾಗೂ ಎಂ.ಕಾಂ ಕೋರ್ಸ್ನ ಅಂತಿಮ ವರ್ಷದ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಿದ್ದರು. ಟಾಟಾ ಎಲೆಕ್ಟ್ರಾನಿಕ್ಸ್, ಮುತ್ತೂಟ್ ಫೈನಾನ್ಸ್, ವಿಎಸ್ಟಿ, ಫ್ಲಿಪ್ಕಾರ್ಟ್ ಸೇರಿದಂತೆ ವಿವಿಧ ಆರು ಕಂಪನಿಗಳ ಪ್ರತಿನಿಧಿಗಳು ವಿದ್ಯಾರ್ಥಿಗಳನ್ನು ಸಂದರ್ಶಿಸಿದರು.

ಕಾಲೇಜಿನ ಆಡಳಿತಾಧಿಕಾರಿ ನವೀನಾ ಎಂ. ಮಾತನಾಡಿ, ‘ವಿವಿಧ ಸ್ಥಳಗಳಿಂದ ಬಂದ ಕಂಪನಿಗಳು ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಸಂದರ್ಶನ ಮಾಡಿವೆ. ಹುದ್ದೆಗೆ ಅಗತ್ಯವಿರುವ ಇಂಗ್ಲಿಷ್ ಭಾಷೆ ಸೇರಿದಂತೆ ವಿವಿಧ ರೀತಿಯ ಕೌಶಲ ತರಬೇತಿಯನ್ನು ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ನೀಡಿದ್ದೇವೆ’ ಎಂದರು.

ಪ್ರಾಂಶುಪಾಲ ವೆಂಕಟರಾಮ್ ಕೆ.ಎಂ, ಉಪನ್ಯಾಸಕರು ಇದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-18-1777733464

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.