ಬೇತಮಂಗಲ: ಸಮೀಪದ ಕಂಗಾಂಡ್ಲಹಳ್ಳಿ ಗ್ರಾಮದಲ್ಲಿ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ಕರಗ ಮಹೋತ್ಸವವು ಅತ್ಯಂತ ಸಡಗರ-ಸಂಭ್ರಮಗಳಿಂದ ಜರುಗಿತು.

ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮದಲ್ಲಿ ಬೆಳಗ್ಗೆಯಿಂದಲೇ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ಹಾಗೂ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನಡೆದವು. ಗ್ರಾಮಸ್ಥರೆಲ್ಲರೂ ಒಗ್ಗೂಡಿ ದೇವಿಯ ಪೂಜೆಯಲ್ಲಿ ಪಾಲ್ಗೊಂಡರು.

ಉತ್ಸವದ ಪ್ರಮುಖ ಆಕರ್ಷಣೆಯಾದ ಕರಗ ಮಹೋತ್ಸವಕ್ಕೆ ರಾತ್ರಿ ವಿದ್ಯುಕ್ತವಾಗಿ ಚಾಲನೆ ಸಿಕ್ಕಿತು. ಕರಗ ಪೂಜಾರಿ ಸತ್ಯಪ್ಪ ಅವರು ಕರಗ ಹೊತ್ತು, ತಮಟೆ ಹಾಗೂ ಮೇಳದವರ ವಾದ್ಯದ ಗತಿಗೆ ತಕ್ಕಂತೆ ನೃತ್ಯ ಪ್ರದರ್ಶನ ನೀಡಿದರು.

ಕರಗ ಸಾಗುವ ಹಾದಿಯುದ್ದಕ್ಕೂ ಭಕ್ತರು ದೇವರಿಗೆ ಹಣ್ಣು-ಕಾಯಿ ಸಮರ್ಪಿಸಿದರು.

ಹಬ್ಬದ ಹಿನ್ನೆಲೆಯಲ್ಲಿ ಇಡೀ ಕಂಗಾಂಡ್ಲಹಳ್ಳಿ ಗ್ರಾಮವನ್ನು ತಳಿರು ತೋರಣ ಹಾಗೂ ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾತ್ರಿ ಹೊತ್ತು ಗ್ರಾಮವು ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ಈ ವೈಭವದ ಕ್ಷಣ ಕಣ್ತುಂಬಿಕೊಳ್ಳಲು ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ಆಗಮಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-18-1740778587

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.