ಬೇತಮಂಗಲ: ಸಮೀಪದ ಕ್ಯಾಸಂಬಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿರುವ ಹೆಡ್ ಓವರ್ ಟ್ಯಾಂಕ್ ಬಿರುಕು ಬಿಟ್ಟಿದ್ದು, ಕೂಡಲೇ ತೆರವುಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

1999ರಲ್ಲಿ ಕೋಲಾರ ಜಿಲ್ಲಾ ಪಂಚಾಯಿತಿಯ ರಾಷ್ಟ್ರೀಯ ಗ್ರಾಮಾಂತರ ನೀರು ಸರಬರಾಜು ಯೋಜನೆಯಡಿ ನಿರ್ಮಾಣಗೊಂಡಿದ್ದ ಹೆಡ್ ಓವರ್ ಟ್ಯಾಂಕ್ ದಶಕಗಳ ಕಾಲ ಗ್ರಾಮಕ್ಕೆ ನೀರುಣಿಸಿತ್ತು. ಆದರೆ, ಟ್ಯಾಂಕ್ ಸಂಪೂರ್ಣ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲಿ ಮಳೆ ಅಥವಾ ಗಾಳಿಗೆ ಸಿಲುಕಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಆಸ್ಪತ್ರೆ ಆವರಣದಲ್ಲಿರುವುದರಿಂದ ಯಾವುದೇ ನಾಹುತ ಸಂಭವಿಸುವ ಮೊದಲು ತೆರವುಗೊಳಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಕ್ಯಾಸಂಬಳ್ಳಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ಈಗಾಗಲೇ ಜಲಜೀವನ್ ಮಿಷನ್ ಯೋಜನೆಯಡಿ ನೂತನ ಹೆಡ್ ಓವರ್ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಹಾಗಾಗಿ ಯಾವುದೇ ಅನಾಹುತ ಸಂಭವಿಸುವ ಮುನ್ನಾ ಹಳೆಯ ಹೆಡ್ ಓವರ್ ಟ್ಯಾಂಕ್ ತೆರವುಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-18-2025732333

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.