ಬೇತಮಂಗಲ: ಕ್ಯಾಸಂಬಳ್ಳಿ ಗ್ರಾಮದಲ್ಲಿ ಅಧಿಕೃತ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಶ್ರೀ ವತ್ಸಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಬೀಗ ಜಡಿದಿದ್ದಾರೆ.

ಕ್ಯಾಸಂಬಳ್ಳಿ ಗ್ರಾಮದ ಕ್ಲಿನಿಕ್ನಲ್ಲಿ ಡಾ.ಮನೋಜ್ ಎಂಬುವವರು ಯಾವುದೇ ಇಲಾಖೆಯ ಅನುಮತಿ ಅಥವಾ ದಾಖಲೆಗಳಿಲ್ಲದೆ ಸಾರ್ವಜನಿಕರಿಗೆ ಚಿಕಿತ್ಸೆ ನೀಡುತ್ತಿದ್ದಾರೆಂದು ಪ್ರಬುದ್ಧ ಪ್ರಜಾ ವೇದಿಕೆ ಸದಸ್ಯರು ಆರೋಗ್ಯ ಇಲಾಖೆಗೆ ದೂರು ನೀಡಿದ್ದರು.

ಈ ದೂರಿನ ಹಿನ್ನೆಲೆ ಕೆಜಿಎಫ್ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪದ್ಮಾವತಿ ಮತ್ತು ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಆಸ್ಪತ್ರೆಯು ಕಾನೂನುಬದ್ಧವಾಗಿ ನಡೆಯುತ್ತಿರುವುದಕ್ಕೆ ಯಾವುದೇ ಸೂಕ್ತ ದಾಖಲೆಗಳು ಲಭ್ಯವಿಲ್ಲದ ಕಾರಣ, ತಕ್ಷಣವೇ ಕೇಂದ್ರಕ್ಕೆ ಬೀಗ ಜಡಿಯಲಾಗಿದೆ.

ಇಲಾಖೆಯ ನಿಯಮ ಉಲ್ಲಂಘಿಸಿ ಯಾವುದೇ ಕ್ಲಿನಿಕ್ ಅಥವಾ ಆರೋಗ್ಯ ಕೇಂದ್ರಗಳು ನಡೆಯುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡಬೇಕು. ಅಂತಹ ಕೇಂದ್ರಗಳ ಮೇಲೆ ತಕ್ಷಣವೇ ದಾಳಿ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು. ಅನಧಿಕೃತವಾಗಿ ವೈದ್ಯಕೀಯ ಸೇವೆ ನೀಡುವವರ ವಿರುದ್ಧ ಇಲಾಖೆಯು ಇನ್ನು ಮುಂದೆ ಕಟ್ಟುನಿಟ್ಟಿನ ನಿಗಾ ವಹಿಸಲಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪದ್ಮಾವತಿ ತಿಳಿಸಿದರು.

ಪ್ರಬುದ್ಧ ಪ್ರಜಾ ವೇದಿಕೆ ಅಧ್ಯಕ್ಷ ಶ್ರೀನಾಥ್ ನಾಸ್ತಿಕ್, ಆರೋಗ್ಯ ಇಲಾಖೆಯ ಪ್ರಸನ್ನ, ರಮೇಶ್ ಸೇರಿದಂತೆ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-18-1741665037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.