ಕೋಲಾರ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಸೇರಿದಂತೆ ಹೆಚ್ಚಿನ ಅವಕಾಶ ಕಲ್ಪಿಸುವಂತೆ ಎಐಸಿಸಿಗೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ ತಿಳಿಸಿದರು

ನಗರದ ಪತ್ರಕರ್ತರ ಭವನದಲ್ಲಿನ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮುನಿಯಪ್ಪ ಏಳು ಬಾರಿ ಲೋಕಸಭಾ ಸದಸ್ಯರಾಗಿ, ಕೇಂದ್ರದ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ ಖಾತೆ ಸೇರಿದಂತೆ ಎರಡು ಬಾರಿ ಕೇಂದ್ರ ಸಚಿವರಾಗಿ ಅಪಾರ ಅನುಭವ ಹೊಂದಿರುವಂಥ ಸಂಘಟನಾ ಚತುರರಾಗಿದ್ದಾರೆ’ ಎಂದರು.

ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಯೋಜನೆಯನ್ನು ಅನುಷ್ಠಾನಕ್ಕೆ ತಂದರು. ನನೆಗುದಿಗೆ ಬಿದ್ದಿದ್ದ ರೈಲೆ ಮಾರ್ಗಗಳಿಗೆ ಮರು ಚಾಲನೆ ನೀಡಿದರು. ಜಿಲ್ಲೆಯಲ್ಲಿ ನೂರಾರು ಕೈಗಾರಿಕೆಗಳು ಬಂದು ಲಕ್ಷಾಂತರ ಮಂದಿಗೆ ಉದ್ಯೋಗ ದೊರೆತು ಜಿಲ್ಲೆಯು ಅಭಿವೃದ್ದಿ ಪಥದತ್ತ ಸಾಗಲು ಅನುವು ಮಾಡಿ ಕೊಟ್ಟರು ಎಂದು ನೆನಪಿಸಿದರು.

ಯಾವುದೇ ಖಾತೆ ನೀಡಿದರೂ ಸಮರ್ಪವಾಗಿ ಆಡಳಿತ ನಡೆಸಿ ಸೌಲಭ್ಯಗಳನ್ನು ಜನತೆಗೆ ತಲುಪಿಸುವಲ್ಲಿ ಸಾಮಾಜಿಕ ನ್ಯಾಯ ದೊರಕಿಸಿ ಕೊಡುವಲ್ಲಿ ಸಂದೇಹವಿಲ್ಲ. ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಮುಖಂಡರಿಗೆ ಅರಿವು ಇದೆ. ಹೀಗಾಗಿಯೇ, ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆ ಅನುಷ್ಠಾನದ ಜವಾಬ್ದಾರಿಯನ್ನು ಮುನಿಯಪ್ಪ ಅವರ ಹೆಗಲಿಗೆ ಹಾಕಿದರು. ಈ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್ ಮಾತನಾಡಿ, ‘ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ನಂತರದಲ್ಲಿ ಕೆ.ಎಚ್.ಮುನಿಯಪ್ಪ ಮುಂಚೂಣಿಯಲ್ಲಿದ್ದಾರೆ. ಅವರಿಗೆ ಕಳೆದ ಬಾರಿಯೇ ಉಪಮುಖ್ಯಮಂತ್ರಿ ಸ್ಥಾನ ತಪ್ಪಿತ್ತು. ಅದೀಗ ಕೈಗೊಡುವ ಸಾಧ್ಯತೆ ಇದೆ’ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಿಸಾನ್ ಕೇತ್ ಘಟಕದ ಅಧ್ಯಕ್ಷ ಸೀತಿಹೊಸೂರು ಮುರಳಿಗೌಡ ಮಾತನಾಡಿ, ‘ಸಚಿವ ಸಂಪುಟ ಪುನರ್ ರಚನೆ ನಡೆಯಲಿದ್ದು, 40 ವರ್ಷಗಳಿಂದ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿರು ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದರು.

ಮಂಜುನಾಥ್, ಪ್ರಸಾದ್ ಬಾಬು, ಶ್ರೀಕೃಷ್ಣ, ಮಧು, ತ್ಯಾಗರಾಜ್, ಮುರಳೀಗೌಡ, ಸೋಮಶೇಖರ್, ಲಾಲ್ ಬಹುದ್ದೂರ್ ಶಾಸ್ತ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-18-2040579718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.