ಕೋಲಾರ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಶಿಷ್ಟಾಚಾರದ ಪ್ರಕಾರ ನಡೆಸಲು ಪೂರ್ವತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಸಮಿತಿಗಳಿಗೆ ನಿರ್ದೇಶನ ನೀಡಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಆ.15 ರಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡುವರು. ಗಣ್ಯರ ಆಗಮನಕ್ಕೆ ಮುನ್ನವೇ ಶಾಲಾ ಮಕ್ಕಳು ನಿಗದಿತ ಸ್ಥಳದಲ್ಲಿ ಕುಳಿತುಕೊಂಡು ಕಾರ್ಯಕ್ರಮ ಮುಗಿಯುವವರೆಗೆ ಹಾಜರಿರುವಂತೆ ಆಯಾ ಶಾಲೆಯ ಶಿಕ್ಷಕರು ಹಾಗೂ ನಿಯೋಜಿಸಿದ ಅಧಿಕಾರಿಗಳು ನಿಗಾ ವಹಿಸಬೇಕು. ಬೆಳಿಗ್ಗೆ 8.30 ರೊಳಗಾಗಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ತಮ್ಮ ಇಲಾಖಾ ಸಿಬ್ಬಂದಿ ಜೊತೆ ಹಾಜರಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಸನ್ಮಾನ ಸಮಾರಂಭಗಳು ನಡೆಯುವಾಗ ಯಾವುದೇ ಗೊಂದಲಗಳಾಗದಂತೆ ಕ್ರಮ ವಹಿಸಬೇಕು. ತುರ್ತು ಪರಿಸ್ಥಿತಿಯಲ್ಲಿ ಆ್ಯಂಬುಲೆನ್ಸ್ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯಬೇಕು. ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಮೂರು ದಿನ ಮುಂಚಿತವಾಗಿಯೇ ನಗರಸಭೆಯ ಅಧಿಕಾರಿಗಳು ನಗರದ ಪ್ರಮುಖ ವೃತ್ತ ಹಾಗೂ ಕ್ರೀಡಾಂಗಣ ಸ್ವಚ್ಛಗೊಳಿಸಬೇಕು. ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಮಾಡಬೇಕು. ಧ್ವಜಸ್ತಂಭ, ವೇದಿಕೆ ವ್ಯವಸ್ಥೆ ಅಚ್ಚುಕಟ್ಟಾಗಿರುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ಉಪವಿಭಾಗಾಧಿಕಾರಿ ಡಾ.ಮೈತ್ರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಅಂಬಿಕಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಮೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.