ಕೋಲಾರ: ನಗರದ ಹೊರವಲಯದ ಇತಿಹಾಸ ಪ್ರಸಿದ್ಧ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ಶುಕ್ರವಾರ ಶ್ರೀರಾಮನವಮಿ ಪ್ರಯುಕ್ತ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ದೇವಾಲಯದ ಆವರಣದಲ್ಲಿ ಈಗಾಗಲೇ ₹ 5 ಲಕ್ಷ ವೆಚ್ಚದಲ್ಲಿ ಹೈಮಾಸ್ಟ್ ಲೈಟ್ ಅಳವಡಿಸಲಾಗಿದೆ, ₹5ಲಕ್ಷ ಅನುದಾನದಲ್ಲಿ ಸಾದರಹಳ್ಳಿ ಗ್ರಾನೆಟ್ ಅಳವಡಿಸುವ ಕೆಲಸ ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಇನ್ನೂ ₹25 ಲಕ್ಷ ಅನುದಾನ ಮಂಜೂರು ಮಾಡಿ ದೇವಾಲಯದ ಕಾಂಪೌಂಡ್, ಕಲ್ಯಾಣಿ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕೊಂಡರಾಜನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ವಿಜಯನಗರ ಮಂಜುನಾಥ್, ನಿರ್ಮಿತಿ ಕೇಂದ್ರದ ನಿರ್ದೇಶಕ ಅಶ್ವಿನ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಬಾಬರ್, ನದೀಂ, ಹೂಹಳ್ಳಿ ಪ್ರಮೋದ್ ಅರ್ಚಕರಾದ ಮಧು ಕುಮಾರ್ ಇದ್ದರು.

ತಾಲ್ಲೂಕಿನ ಚೋಳಘಟ್ಟ ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಾಲಯದ ಪ್ರತಿಷ್ಠಾಪನೆಯಲ್ಲಿ ಶಾಸಕರು ಭಾಗವಹಿಸಿದ್ದರು.

ಈ ವೇಳೆ ಗ್ರಾಮಸ್ಥರು ರಸ್ತೆ ಅಭಿವೃದ್ಧಿಗೆ ಮನವಿ ಮಾಡಿದರು. ಅದಕ್ಕೆ ಉತ್ತರಿಸಿದ ಕೊತ್ತೂರು, ‘ಛತ್ರಕೋಡಿಹಳ್ಳಿಯಿಂದ ಬೆಗ್ಲಿಬೆಣಜೇನಹಳ್ಳಿ ಮಾರ್ಗವಾಗಿ ಚೋಳಘಟ್ಟದವರಗಿನ ರಸ್ತೆಗೆ ಈಗಾಗಲೇ ₹4.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಇದ್ದು, ಆದಷ್ಟು ಬೇಗ ಕಾಮಗಾರಿ ಪ್ರಾರಂಬಿಸಲಾಗುತ್ತದೆ’ ಎಂದು ಭರವಸೆ ನೀಡಿದರು

ದಕ್ಷಿಣ ಕಸಬಾ ಸೊಸೈಟಿ ಮಾಜಿ ಅಧ್ಯಕ್ಷ ಚೋಳಘಟ್ಟ ಶ್ರೀನಿವಾಸ್, ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯ ಭರತ್ ಹಾಗೂ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-18-974836542

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.