ಕೋಲಾರ: ನಗರದ ಪಾಲಸಂದ್ರ ಬಡಾವಣೆಯಲ್ಲಿ ಶನಿವಾರ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್ಎಸ್) ಸಂಘಟನೆಯ 90ನೇ ವರ್ಷದ ಸಂಸ್ಥಾಪನಾ ದಿನಾಚರಣೆ ನಡೆಯಿತು.

ಸಂಘದ ಜಿಲೆ ಘಟಕದ ಅಧ್ಯಕ್ಷ ನುಕ್ಕನಹಳ್ಳಿ ಶ್ರೀರಾಮ್ ಧ್ವಜಾರೋಹಣ ಮಾಡಿ ಮಾತನಾಡಿದರು.

ದೇಶದಲ್ಲಿ ಕೆಲವೇ ಕೆಲವು ಶ್ರೀಮಂತರ ಆದಾಯ ಮತ್ತು ಆಸ್ತಿ ಎಲ್ಲೆ ಮೀರಿ ಬೆಳೆಯುತ್ತಿದೆ. ಇದಕ್ಕೆ ಕಾರಣವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸದಿದ್ದರೆ, ಬಿಕ್ಕಟ್ಟಿನಲ್ಲಿರುವ ಕೃಷಿಯನ್ನಾಗಲಿ ಅಥವಾ ಸಂಕಷ್ಟದಲ್ಲಿರುವ ರೈತ ಸಮುದಾಯವನ್ನಾಗಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಆದಾಯ ದ್ವಿಗುಣ ಮಾಡುವ ಭರವಸೆ ನೀಡಿ, ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ, ಭೂಸ್ವಾಧೀನ ತಿದ್ದುಪಡಿ ಕಾಯ್ದೆ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ತಿದ್ದುಪಡಿ ಮಾಡುವ ಮೂಲಕ ರೈತರ ಮತ್ತು ಕೂಲಿಕಾರರ ಆದಾಯವನ್ನು ಸಂಪೂರ್ಣವಾಗಿ ಕುಸಿಯುವಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ, ಸಹ ಕಾರ್ಯದರ್ಶಿ ಸುಗಟೂರು ಶ್ರೀಧರ್, ತಾಲ್ಲೂಕು ಅಧ್ಯಕ್ಷ ಹೊಲ್ಲಂಬಳ್ಳಿ ವೆಂಕ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಸದಸ್ಯರಾದ ರಾಜೇಂದ್ರ ಪ್ರಸಾದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-18-1894347595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.