ಬೇತಮಂಗಲ: ಕೃಷ್ಣಾವರಂನಿಂದ ಕೆಜಿಎಫ್ಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಹಾಗೂ ಸೇತುವೆಯನ್ನು ಬುಧವಾರ ಎಇಇ ರಾಜಶೇಖರ್ ಖುದ್ದಾಗಿ ಪರಿಶೀಲನೆ ನಡೆಸಿದರು.

ಕೃಷ್ಣಾವರಂನಿಂದ ಸ್ಕೂಲ್ ಆಫ್ ಮೈನ್ಸ್ವರೆಗಿನ ಮಾರ್ಗದಲ್ಲಿರುವ ತಿರುವು ಅತ್ಯಂತ ಅಪಾಯಕಾರಿಯಾಗಿದ್ದು, ಇಲ್ಲಿ ಈ ಹಿಂದೆ ಸಂಭವಿಸಿದ ಅಪಘಾತಗಳಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸಾವಿನ ಸರಣಿಗೆ ಬ್ರೇಕ್ ಹಾಕಲು ಲೋಕೋಪಯೋಗಿ ಇಲಾಖೆಯು ಈ ರಸ್ತೆಯನ್ನು ಆಧುನೀಕರಿಸಲು ಮುಂದಾಗಿದ್ದು, ಇತ್ತೀಚೆಗೆ ಶಾಸಕಿ ಕಾಮಗಾರಿಗೆ ಚಾಲನೆ ನೀಡಿದ್ದರು. ಇದೀಗ ಕಾಮಗಾರಿಯು ಭರದಿಂದ ಸಾಗುತ್ತಿದೆ ಎಂದು ತಿಳಿಸಿದರು.

ಸಂಚಾರ ಸುಗಮಗೊಳಿಸಲು ರಸ್ತೆ ವಿಸ್ತರಣೆ ಹಾಗೂ ಮಳೆಗಾಲದಲ್ಲಿ ನೀರು ಹರಿಯಲು ಅನುಕೂಲವಾಗುವಂತೆ ವೈಜ್ಞಾನಿಕವಾಗಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇನ್ನು ಎರಡು-ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-18-959923746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.