ಕೋಲಾರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ನೌಕರರ ಮುಷ್ಕರ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಬದಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿ ಎಂ.ಆರ್.ರವಿ, ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲೀಕರಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಮಂಗಳವಾರ ಖಾಸಗಿ ಬಸ್ ಮಾಲೀಕರು, ಶಾಲಾ ಬಸ್ ನಿರ್ವಹಣಾ ಮಂಡಳಿ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಾತನಾಡಿದರು.

ಮುಷ್ಕರದ ಅವಧಿಯಲ್ಲಿ ಜಿಲ್ಲೆಯ ಸಾರಿಗೆ ಸಂಪರ್ಕ ಸಂಪೂರ್ಣವಾಗಿ ಸುಗಮವಾಗಿರಲು ಕೈಗೊಳ್ಳಬೇಕಾದ ಬದಲಿ ಯೋಜನೆ (ಪ್ಲಾನ್-ಬಿ) ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ಮುಷ್ಕರದ ಸಂದರ್ಭದಲ್ಲಿ ಕಾನೂನಾತ್ಮಕ ತೊಡಕುಗಳು ಎದುರಾಗದಂತೆ ಎಚ್ಚರಿಕೆ ವಹಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ರೂಟ್ ಪರ್ಮಿಟ್ ಇಲ್ಲದೆ ವಾಹನಗಳನ್ನು ರಸ್ತೆಗಿಳಿಸಿದಾಗ ಅಪಘಾತ ಸಂಭವಿಸಿದರೆ ವಿಮೆ ಕ್ಲೈಮ್ ಮತ್ತು ಮಾಲೀಕರ ಮೇಲಿನ ಹೊಣೆಗಾರಿಕೆಯ ಕಾನೂನು ಸೂಕ್ಷ್ಮತೆಗಳನ್ನು ಅಧಿಕಾರಿಗಳು ಜಿಲ್ಲಾಧಿಕಾರಿ ಗಮನಕ್ಕೆ ತಂದರು.

ಇದಕ್ಕೆ ತಕ್ಷಣವೇ ಸ್ಪಂದಿಸಿದ ಜಿಲ್ಲಾಧಿಕಾರಿಯು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 88ರ ಅಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಎದುರಿಸಲು ಖಾಸಗಿ ಬಸ್ಗಳಿಗೆ ತಾತ್ಕಾಲಿಕ ಅಥವಾ ವಿಶೇಷ ಪರ್ಮಿಟ್ (ಜನರಲ್ ಆರ್ಡರ್) ನೀಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಶೇಷವಾಗಿ ಕೋಲಾರದಿಂದ ಬೆಂಗಳೂರಿಗೆ ಕಲ್ಪಿಸುವ ಪ್ರಮುಖ ಟ್ರಂಕ್ ರೂಟ್ಗಳು ಹಾಗೂ ತಾಲ್ಲೂಕು ಕೇಂದ್ರಗಳಾದ ಕೆಜಿಎಫ್, ಬಂಗಾರಪೇಟೆ, ಮುಳಬಾಗಿಲು, ಶ್ರೀನಿವಾಸಪುರ ಮುಂತಾದ ಕಡೆಗಳಿಂದ ಕೋಲಾರಕ್ಕೆ ಸಂಪರ್ಕಿಸುವ ಮಾರ್ಗಗಳಲ್ಲಿ 80ಕ್ಕೂ ಹೆಚ್ಚು ಖಾಸಗಿ ಬಸ್ಗಳನ್ನು ನಿಯೋಜಿಸಿ, ನಿತ್ಯ 810 ಟ್ರಿಪ್ಗಳನ್ನು ಕಾರ್ಯಾಚರಣೆ ಮಾಡಲು ಮ್ಯಾಪಿಂಗ್ ವ್ಯವಸ್ಥೆ ಮಾಡಿಕೊಳ್ಳುವಂತೆ ಹೇಳಿದರು.

ಕೆಜಿಎಫ್, ಮಾಲೂರು ಹಾಗೂ ಬಂಗಾರಪೇಟೆ ವಲಯದ ಪ್ರಯಾಣಿಕರು ಕೋಲಾರಕ್ಕೆ ಬರುವ ಅಗತ್ಯವಿಲ್ಲದೆ, ಆಯಾ ಭಾಗದ ಶಾಲಾ-ಕಾಲೇಜು ವಾಹನಗಳು ಹಾಗೂ ಖಾಸಗಿ ಬಸ್ಗಳನ್ನು ಸ್ಥಳೀಯವಾಗಿಯೇ ಬಳಸಿಕೊಂಡು ಅಲ್ಲಿನ ಸಾರಿಗೆ ಬೇಡಿಕೆಯನ್ನು ಈಡೇರಿಸಲು ವಲಯವಾರು ವಿಭಜನೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಂತರರಾಜ್ಯ ಸಾರಿಗೆಗಿಂತ ನಮ್ಮ ಜಿಲ್ಲೆಯ ಮತ್ತು ಬೆಂಗಳೂರಿಗೆ ಸಂಚರಿಸುವ ನಮ್ಮದೇ ರಾಜ್ಯದ ಪ್ರಯಾಣಿಕರ ಹಿತರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವೇಣುಗೋಪಾಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಅಲ್ಮಾಸ್ ಪರ್ವೀನ್ ತಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ್, ಖಾಸಗಿ ಬಸ್ ಮಾಲೀಕರು, ವಿದ್ಯಾಲಯಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-18-2042733624

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.