ಕೋಲಾರ: ದೇಶದಲ್ಲಿ ಆಳುವ ಸರ್ಕಾರದ ನೀತಿಗಳಿಂದಾಗಿ ಕಾರ್ಮಿಕರ ಭದ್ರತೆಗಾಗಿ ಇರುವ ಕಾನೂನುಗಳು ಹಂತಹಂತವಾಗಿ ಮರೀಚಿಕೆಯಾಗುತ್ತಿವೆ. ಕಾರ್ಮಿಕರ ಮೇಲಾಗುತ್ತಿರುವ ಅನ್ಯಾಯ, ದಬ್ಬಾಳಿಕೆ, ಶೋಷಣೆ ನಿಂತಿಲ್ಲ, ಕಾರ್ಮಿಕರ ಹಕ್ಕುಗಳು ಸಮರ್ಪಕವಾಗಿ ಜಾರಿ ಮಾಡಲು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಐ.ಎನ್.ಟಿ.ಯು.ಸಿ ಜಿಲ್ಲಾ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು.

ನಗರದ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಮುಂಭಾಗ ಶುಕ್ರವಾರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದಲ್ಲಿ ಮೋದಿ ಸರ್ಕಾರ ಬಂದ ನಂತರದಲ್ಲಿ ಕಾರ್ಮಿಕರಿಗೆ ನೀಡಬೇಕಾದ ನ್ಯಾಯಯುತ ಸೌಲಭ್ಯಗಳನ್ನು ನೀಡುತ್ತಿಲ್ಲ. ಕಂಪನಿಗಳ ಹಾಗೂ ಬಂಡವಾಳಶಾಹಿಗಳ ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ. ದೇಶದಲ್ಲಿ ಇಂದಿಗೂ ಬಡತನ, ನಿರುದ್ಯೋಗದಂಥ ಗಂಭೀರವಾದ ಸಮಸ್ಯೆಗಳಿವೆ. ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಟಕ್ಕೆ ನಾವು ಎಲ್ಲರೂ ಸಜ್ಜಾಗಬೇಕಿದೆ. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದರು.

ಕೇಂದ್ರ ಸರ್ಕಾರವು ಬಹುರಾಷ್ಟ್ರೀಯ ಹಾಗೂ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇತ್ತಿಚೀನ ನಾಲ್ಕು ಕಾರ್ಮಿಕ ಸಂಹಿತೆಗಳೇ ನಿದರ್ಶನವಾಗಿವೆ. ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಯಾಗಬೇಕಿದೆ, ಕಾರ್ಮಿಕರಿಂದಾಗಿಯೇ ಕಾರ್ಖಾನೆ ಇದೆ ಎಂಬುದನ್ನು ಮಾಲೀಕರು ತಿಳಿಯಬೇಕಾಗಿದೆ ಎಂದು ತಿಳಿಸಿದರು.

ಐ.ಎನ್.ಟಿ.ಯು.ಸಿ ಜಿಲ್ಲಾ ಕಾರ್ಯದರ್ಶಿ ಮುರಳೀಧರ್, ತಾಲೂಕು ಅಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ನಾಗರಾಜ್, ಖಜಾಂಚಿ ಲಕ್ಷ್ಮಿಕಾಂತಮ್ಮ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಮಾಲಾ, ತಾಲೂಕು ಸಮಿತಿ ಸದಸ್ಯರಾದ ಮುನಿಯಮ್ಮ, ಶಿವಣ್ಣ, ಅನಿಲ್, ಮಾಲಮ್ಮ, ಶಂಕರಪ್ಪ, ಮುರಳಿಧರ್, ಕುಮಾರ್, ಜಡೇರಿ ನಾರಾಯಣಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-18-188569881

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.