ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾರ್ಮಿಕ ಸಚಿವರಾಗಿದ್ದ ಸಂದರ್ಭದಲ್ಲಿ ಜಾರಿಯಾಗಿದ್ದ ಎಲ್ಲಾ ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿದ ಕೇಂದ್ರ ಸರ್ಕಾರವು ಏಪ್ರಿಲ್ 1ರಿಂದ ದೇಶದಾದ್ಯಂತ ಕಾರ್ಮಿಕ ಸಂಹಿತೆ ಜಾರಿ ಮಾಡಿರುವುದು ಖಂಡನೀಯ. ತಕ್ಷಣ ಈ ಹಿಂದೆ ಇದ್ದ ಕಾರ್ಮಿಕ ಕಾನೂನುಗಳನ್ನು ಮರು ಜಾರಿ ಮಾಡಬೇಕೆಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಆಗ್ರಹಿಸಿದರು.

ವೈಜ್ಞಾನಿಕ ಕನಿಷ್ಠ ವೇತನದ ಜಾರಿಗೆ - ಕಾರ್ಮಿಕ ಹಕ್ಕುಗಳನ್ನು ರಕ್ಷಿಸಲು ಒತ್ತಾಯಿಸಿ ಸಿಐಟಿಯು ಕರೆಯ ಮೇರೆಗೆ ನಗರದ ನಚಿಕೇತ ನಿಲಯದ ಆವರಣದಲ್ಲಿ ಮಂಗಳವಾರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಹಿ ಸಂಗ್ರಹ ಚಳವಳಿ ಉದ್ಘಾಟಿಸಿ ಮಾತನಾಡಿದರು.

ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಮತ್ತು ಸರ್ಕಾರದ ಹಲವು ಸುತ್ತೋಲೆಗಳ ಪ್ರಕಾರ ಪ್ರತಿ 5 ವರ್ಷಕ್ಕೊಮ್ಮೆ ಕನಿಷ್ಠ ವೇತನವನ್ನು ಪರಿಷ್ಕರಣೆ ಮಾಡಬೇಕು. ಆದರೆ ರಾಜ್ಯದಲ್ಲಿ 2017 ರಲ್ಲಿ ಪರಿಷ್ಕರಣೆ ಮಾಡಿದ ನಂತರ ಇಲ್ಲಿಯ ತನಕ ಪರಿಷ್ಕರಣೆ ಮಾಡಿಲ್ಲ. ರಾಜ್ಯದ ಎಲ್ಲಾ ಕಾರ್ಮಿಕರಿಗೂ ಅನ್ವಯ ಆಗುವಂತೆ ತುಟ್ಟಿಭತ್ಯೆಯೊಂದಿಗೆ ವಲಯ 3ರಲ್ಲಿನ ಅಕುಶಲ ಕಾರ್ಮಿಕರಿಗೆ ಮಾಸಿಕ ₹ 31 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಪ್ರಕಟಿತ ಕನಿಷ್ಠ ವೇತನಕ್ಕಿಂತಲೂ ಕಡಿಮೆ ವೇತನ ಪಡೆಯುವ ಸರ್ಕಾರಿ, ಖಾಸಗಿ ವಲಯಗಳಲ್ಲಿ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು, ನೌಕರರಿಗೆ ಹಾಗೂ ಎಲ್ಲಾ ಸ್ವರೂಪದ ಖಾಯಮೇತರ ಕಾರ್ಮಿಕರಿಗೆ, ನೌಕರರಿಗೆ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಕಾರ್ಮಿಕ ಸಂಹಿತೆಗಳಿಗೆ, ಕಾರ್ಮಿಕರ ಪರವಾಗಿ ರಾಜ್ಯದ ತಿದ್ದುಪಡಿಗಳನ್ನು ಮಾಡಿದ ನಂತರ ನಿಯಮಾವಳಿಗಳನ್ನು ರೂಪಿಸಿ ಜಾರಿಗೆ ತರಬೇಕು. ಖಾಯಂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು. ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎನ್.ಎನ್.ಶ್ರೀರಾಮ್, ಸಿಐಟಿಯು ಜಿಲ್ಲಾ ಮುಖಂಡರಾದ ಹೆಚ್.ಬಿ.ಕೃಷ್ಣಪ್ಪ, ಎಂ.ಭೀಮರಾಜ್, ಎಸ್.ಆಶಾ, ರಾಮಚಂದ್ರಪ್ಪ, ವಿಜಯಕುಮಾರ್, ಮೂರ್ತಿ, ರತ್ನಮ್ಮ, ವೆಂಕಟೇಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-18-568486321

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.