ಕೋಲಾರ: ಕಾರ್ಮಿಕರಿಗೆ ನೀಡುತ್ತಿದ್ದ ಕೆಲಸದ ಅವಧಿ, ಭದ್ರತೆ, ಸುರಕ್ಷತೆ, ಹಲವು ಸೌಲಭ್ಯಗಳನ್ನು ಕಡಿತ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕಾರ್ಮಿಕರ ದುಡಿಮೆಯನ್ನು ಲೂಟಿ ಮಾಡಲು ಕಾರ್ಪೊರೇಟ್ ಕಂಪನಿಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸಿಐಟಿಯು ರಾಜ್ಯಾಧ್ಯಕ್ಷ ಮೀನಾಕ್ಷಿಸುಂದರಂ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸಿಐಟಿಯು ಜಿಲ್ಲಾ ಸಮಿತಿಯಿಂದ ಹಮ್ಮಿಕೊಂಡಿದ್ದ ಸಂಘಟನಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯರು ನಡೆಸಿದ ಹೋರಾಟಗಳಿಂದ ಹತ್ತಾರು ಕಾರ್ಮಿಕ ಕಾಯ್ದೆಗಳು ಜಾರಿಯಾಗಿ, ಇಲ್ಲಿಯ ತನಕ ಕಾರ್ಮಿಕರಿಗೆ ಹಲವು ಸೌಲಭ್ಯಗಳು ದೊರೆಯುತ್ತಿದ್ದವು. ಮೋದಿ ಪ್ರಧಾನಿಯಾದ ನಂತರ ಸೌಲಭ್ಯಗಳನ್ನು ಹೆಚ್ಚು ಮಾಡಲಾಗುತ್ತಿದೆ ಎಂದು ಸುಳ್ಳು ಹೇಳಿ ಈ ಕಾರ್ಮಿಕ ಕಾಯ್ದೆಗಳನ್ನು ರದ್ದುಪಡಿಸಿ, ಕಾರ್ಮಿಕರಿಗೆ ದ್ರೋಹ ಬಗೆದಿದ್ದಾರೆ ಎಂದು ದೂರಿದರು.

ಕೆಲಸದ ಅವಧಿಯನ್ನು ಹೆಚ್ಚು ಮಾಡಲು ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದೆ. ಊಟದ ಸಮಯವನ್ನು ಹೊರತುಪಡಿಸಿ 8 ಗಂಟೆ ದುಡಿಯಬೇಕು, ಕಾರ್ಮಿಕರು ಸಂಘವನ್ನು ರಚಿಸಿಕೊಳ್ಳಲು ಇರುವ ಸಂವಿಧಾನ ಬದ್ಧ ಹಕ್ಕನ್ನು ಕಠಿಣಗೊಳಿಸಲಾಗಿದೆ, ಹೆಚ್ಚುವರಿ ಕೆಲಸ ಮಾಡಿದರೆ ಸೌಲಭ್ಯ ಇಲ್ಲ, ಸಣ್ಣಪುಟ್ಟ ಕಾರಣ ನೀಡಿ ಕಾರ್ಮಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಕನಿಷ್ಠ ವೇತನ ನಿಗದಿಪಡಿಸಲು ಇಲ್ಲಿಯ ತನಕ ಇದ್ದ ಮಾನದಂಡಗಳನ್ನು ಕೈಬಿಟ್ಟು, ಯಾವುದೇ ಚರ್ಚೆ ನಡೆಸದೆ ಸರ್ಕಾರವೇ ಏಕಪಕ್ಷೀಯವಾಗಿ ಕನಿಷ್ಠ ವೇತನ ನಿಗದಿಪಡಿಸಲು ಅವಕಾಶ ನೀಡಲಾಗಿದೆ ಎಂದು ಟೀಕಿಸಿದರು.

ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಿ.ಎನ್.ಮಂಜುನಾಥ್ ಮಾತನಾಡಿ, ‘ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು, ಬಿಜೆಪಿಯ ಕಾರ್ಮಿಕ ವಿರೋಧಿ ನೀತಿಗಳನ್ನೇ ರಾಜ್ಯದಲ್ಲಿ ಜಾರಿಗೊಳಿಸುತ್ತಿದೆ. ಇದರಿಂದ ಕಾರ್ಮಿಕರು ಕಡಿಮೆ ವೇತನಕ್ಕೆ ಹೆಚ್ಚಿನ ಕೆಲಸ ಮಾಡುವ ಪರಿಸ್ಥಿತಿ ಇದೆ. 9 ವರ್ಷ ಕಳೆದರೂ ರಾಜ್ಯದಲ್ಲಿ ಕನಿಷ್ಠ ವೇತನ ಪರಿಷ್ಕರಣೆ ಮಾಡಿಲ್ಲ. ಈ ಕುರಿತು ಮೇ 30 ರಂದು ರಾಜ್ಯದಾದ್ಯಾಂತ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳ ಮುತ್ತಿಗೆ ಹಾಕಲಾಗುತ್ತಿದ್ದು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಸಿಐಟಿಯು ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಸಂಘಟನಾ ಕಾರ್ಯ ಯೋಜನೆಯನ್ನು ಮಂಡಿಸಿದರು. ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎ.ಆರ್.ಬಾಬು, ಆಂಜಲಮ್ಮ ಉಪಸ್ಥಿತರಿದ್ದರು, ಎಂ.ಭೀಮರಾಜ್ ಸ್ವಾಗತಿಸಿದರು. ಎಚ್.ಬಿ.ಕೃಷ್ಣಪ್ಪ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-18-976362128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.