ಕೋಲಾರ; ಕಾರ್ಮಿಕರು, ಬಡವರು, ಸಾಮಾನ್ಯ ವರ್ಗದವರ ವೋಟ್ ಪಡೆಯುವ ಜನಪ್ರತಿನಿಧಿಗಳು ಶ್ರೀಮಂತರು, ಬಂಡವಾಳಶಾಹಿಗಳು ಹಾಗೂ ಉದ್ಯಮಿಗಳ ಪರವಾಗಿ ಕಾನೂನು ರೂಪಿಸುವ ಹಾಗೂ ರಕ್ಷಣೆ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ ಕೃಷ್ಣಪ್ಪ ಆರೋಪಿಸಿದರು.

ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ಪಾಲಸಂದ್ರ ಲೇಔಟ್ ಕಚೇರಿ ಮುಂದೆ ಶುಕ್ರವಾರ ನಡೆದ ಕಾರ್ಮಿಕ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕಾರ್ಮಿಕರ ರಕ್ಷಣೆಗೆ ಇದ್ದ ಕಾನೂನುಗಳನ್ನು ಹಂತಹಂತವಾಗಿ ನಾಶಮಾಡುವ ಮೂಲಕ ಕಾರ್ಮಿಕರ ಶಕ್ತಿಯನ್ನು ದಮನ ಮಾಡಲು ಹೊರಟಿದ್ದಾರೆ. ಕಾರ್ಮಿಕರು ಅನೇಕ ಹೋರಾಟದಿಂದ ಹಕ್ಕುಗಳನ್ನು ಪಡೆದುಕೊಂಡಿದ್ದಾರೆ. ದುರಂತವೆಂದರೆ ಇವತ್ತು ಅವುಗಳನ್ನು ಒಂದೊಂದಾಗಿ ಕಳೆದುಕೊಳ್ಳುತ್ತಾ ಬರುತ್ತಿದ್ದಾರೆ. ಅವುಗಳನ್ನು ಉಳಿಸಿಕೊಳ್ಳಲು ಹೋರಾಟ ಅನಿವಾರ್ಯವಾಗಿದೆ ಎಂದರು

ಹೋರಾಟದ ಭಾಗವಾಗಿ ಸಹಿ ಸಂಗ್ರಹ ಅಭಿಯಾನ, ಗೇಟ್ ಮೀಟಿಂಗ್ಗಳು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಧ್ವಜಾರೋಹಣ ಮಾಡಿ ಮಾತನಾಡಿದ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ‘ಕಾರ್ಮಿಕರ ಶ್ರಮದಿಂದ ದೇಶದ ಸಂಪತ್ತು ಸೃಷ್ಟಿಯಾಗುತ್ತಿದ್ದರೂ ಅದರ ಹಂಚಿಕೆಯಲ್ಲಿ ತೀವ್ರ ಅಸಮಾನತೆ ಎದ್ದು ಕಾಣುತ್ತಿದೆ. ದೇಶದ ಒಟ್ಟು ಸಂಪತ್ತಿನ ಬಹುಪಾಲು ಕೆಲವೇ ಮಂದಿಯ ಕೈಯಲ್ಲಿ ಕೇಂದ್ರೀಕೃತವಾಗಿದೆ. ಬಹುಸಂಖ್ಯಾತ ಕಾರ್ಮಿಕ ವರ್ಗ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಜಾಗತಿಕ ಬಿಕ್ಕಟ್ಟು, ಬೆಲೆ ಏರಿಕೆ ಮತ್ತು ಸ್ಥಗಿತಗೊಂಡ ವೇತನಗಳು ಕಾರ್ಮಿಕರ ಬದುಕನ್ನು ಮತ್ತಷ್ಟು ದುಸ್ಥಿತಿಗೆ ತಳ್ಳಿವೆ’ ಎಂದು ದೂರಿದರು.

ಕಾರ್ಮಿಕರ ಪ್ರಮುಖ ಬೇಡಿಕೆಗಳಾಗಿ ₹ 36 ಸಾವಿರ ಕನಿಷ್ಠ ವೇತನ ಜಾರಿ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ, ಗುತ್ತಿಗೆ ಪದ್ಧತಿ ನಿರ್ಮೂಲನೆ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ವಸತಿ–ಆರೋಗ್ಯ–ಶಿಕ್ಷಣ ಸೇರಿದಂತೆ ಮೂಲಹಕ್ಕುಗಳ ಖಾತರಿಗೆ ಒತ್ತಾಯಿಸಲಾಗಿದೆ. ಸರ್ಕಾರ ಕರಡು ಅಧಿಸೂಚನೆಗಳನ್ನು ಜಾರಿಗೆ ತರಲು ವಿಳಂಬ ಮಾಡುತ್ತಿದ್ದು, ಬಂಡವಾಳದಾರರ ಪರ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ಸಿಐಟಿಯು ಮುಖಂಡರಾದ ಎಂ.ಭೀಮರಾಜ್, ಆಶಾ. ರಾಮಚಂದ್ರಪ್ಪ, ಶಿವರಾಜ್, ಕಲ್ಪನಾ, ವೆಂಕಟರಾಮೇಗೌಡ, ಲೋಕೇಶ್ವರಿ, ಮಂಜುಳಾ, ರಾಮಮೂರ್ತಿ, ವಿಜಯಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-18-2061432312

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.