ಕೋಲಾರ: ಈಗಿನ ಬೆಲೆ ಏರಿಕೆಗೆ ಅನುಗುಣವಾಗಿ ರಾಜ್ಯದಲ್ಲಿನ ಕಾರ್ಮಿಕರಿಗೆ ಸಮಾನ ಕನಿಷ್ಠ ವೇತನ ₹36 ಸಾವಿರ ನಿಗದಿಪಡಿಸಬೇಕೆಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಆಗ್ರಹಿಸಿದರು.

ಸಿಐಟಿಯುಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ‘ದೇಶದಲ್ಲಿ ಪ್ರತಿ 5 ವರ್ಷಕ್ಕೊಮ್ಮೆ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಪರಿಷ್ಕರಣೆ ಮಾಡಬೇಕೆಂದು ಕಾನೂನು ಇದ್ದರೂ, ರಾಜ್ಯದಲ್ಲಿ 7 ವರ್ಷಗಳ ನಂತರ 22 ಮೇ 2026 ರಂದು ಪರಿಷ್ಕರಣೆ ಮಾಡಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರಾಜ್ಯ ಸರ್ಕಾರ ಪ್ರಕಟಿಸಿರುವ ಕನಿಷ್ಠ ವೇತನದಿಂದ ಒಂದು ಕೋಟಿಗಿಂತ ಹೆಚ್ಚಿನ ಕಾರ್ಮಿಕರಿಗೆ ಪ್ರಯೋಜನವಾಗಲಿದೆ ಎಂಬುದನ್ನು ಸಿಐಟಿಯು ಮನಗಾಣುತ್ತಲೇ ಹೆಚ್ಚಳ ಮಾಡಿರುವ ಕನಿಷ್ಠ ವೇತನವು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾನದಂಡಗಳಿಗೆ ಪೂರಕವಾಗಿಲ್ಲ. ಇವತ್ತಿನ ಬೆಲೆಗಳು ಮತ್ತು ಜೀವನ ವೆಚ್ಚಕ್ಕೆ ಅನುಗುಣವಾಗಿ ಸರಾಸರಿ ₹ 36 ಸಾವಿರ ಕನಿಷ್ಠ ವೇತನ ನಿಗದಿ ಮಾಡಬೇಕು. ಜೊತೆಗೆ 2026ರ ಏಪ್ರಿಲ್ 1ರಿಂದ ಪೂರ್ವನ್ವಯವಾಗುವಂತೆ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ, ‘ಗಾರ್ಮೆಂಟ್ಸ್, ಪ್ಲಾಂಟೇಷನ್, ಬೀಡಿ, ಅಗರಬತ್ತಿ, ಕೈಮಗ್ಗ ಸೇರಿ 19 ವಿಭಾಗದ ಉದ್ದಿಮೆಗಳನ್ನು ಹೊರಗಿಟ್ಟಿರುವ ರಾಜ್ಯ ಸರ್ಕಾರದ ಕ್ರಮದಿಂದ ಬಹುಸಂಖ್ಯಾತ ಮಹಿಳಾ ಕಾರ್ಮಿಕರು ಕನಿಷ್ಠ ವೇತನ ಹೆಚ್ಚಳದಿಂದ ವಂಚಿತರಾಗಲಿದ್ದಾರೆ. ಪ್ರಸ್ತುತ ಮೇ 22 ರಂದು ಜಾರಿಗೆ ತಂದಿರುವ ಕನಿಷ್ಠ ವೇತನವನ್ನೇ ಈ 19 ಉದ್ದಿಮೆಗಳಿಗೂ ವಿಸ್ತರಿಸಿ ಕೂಡಲೇ ಅಧಿಸೂಚನೆ ಹೊರಡಿಸಬೇಕು. ಸ್ಕೀಂ ನೌಕರರನ್ನು ಕನಿಷ್ಠ ವೇತನ ವ್ಯಾಪ್ತಿಗೆ ತರಬೇಕೆಂದು’ ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ ಕೃಷ್ಣಪ್ಪ ಮಾತನಾಡಿ, ‘ಪ್ರಸ್ತುತ ಪ್ರಕಟಿತ ಕನಿಷ್ಠ ವೇತನದಿಂದ ಕಾರ್ಮಿಕರಿಗೆ ಸ್ವಲ್ಪ ಪ್ರಮಾಣದಲ್ಲಿ ವೇತನ ಹೆಚ್ಚಳ ಆಗುವುದರಿಂದ ಮಾಲೀಕರ ಯಾವುದೇ ಒತ್ತಡಕ್ಕೆ ಮಣಿಯದೆ ಈ ಪರಿಷ್ಕೃತ ಕನಿಷ್ಠ ವೇತನದ ಆದೇಶವನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು. ಸರ್ಕಾರಿ ಕಚೇರಿಗಳು ಮತ್ತು ಕೈಗಾರಿಕೆಗಳಲ್ಲಿ ದುಡಿಯುವ ಗುತ್ತಿಗೆ, ಹೊರ ಗುತ್ತಿಗೆ ಕಾರ್ಮಿಕರನ್ನು ಖಾಯಂ ಮಾಡಲು ವಿಶೇಷ ಮಸೂದೆಯನ್ನು ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ‘ಮೂರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿದ್ದರಿಂದ ರಾಜ್ಯ ಸರ್ಕಾರ ಕನಿಷ್ಠ ವೇತನವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಇದರಂತೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಜಾರಿಯಾಗುವಂತೆ ಜಿಲ್ಲಾಡಳಿತ ಗಮನ ನೀಡಬೇಕು. ಜಿಲ್ಲೆಯ ಮಟ್ಟದಲ್ಲಿ ಹಲವು ವಿಭಾಗದ ಕಾರ್ಮಿಕರು ಅತ್ಯಂತ ಸಂಕಷ್ಠದ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದು, ಇವರನ್ನು ನಿವಾರಿಸಲು ಗಮನ ನೀಡಬೇಕು ಎಂದು ಒತ್ತಾಯಿಸಿಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ಕೇಂದ್ರ ನಿಯಮಗಳನ್ನು ರೂಪಿಸಿ ಮೇ 8 ರಿಂದ ಜಾರಿಗೊಳಿಸಿದೆ. ಇದರಿಂದ ಕಾರ್ಮಿಕ ವರ್ಗವು ಸ್ವಾತಂತ್ಯ ಪೂರ್ವದಿಂದಲೂ ಹೋರಾಟಗಳಿಂದ ಪಡೆದಿರುವ ಮೂಲಭೂತ ಹಕ್ಕುಗಳು ಮೊಟಕುಗೊಳ್ಳಲಿದೆ. ಕಾರ್ಮಿಕರ ಶ್ರಮದ ಶೋಷಣೆ ಹೆಚ್ಚಾಗಲಿದೆ, ಕರ್ನಾಟಕದಲ್ಲಿ ಇರುವ ಕೈಗಾರಿಕಾ ಸಂಬಂಧಗಳಿಗೆ ಧಕ್ಕೆಯಾಗಲಿದೆ. ಇದು ಕರ್ನಾಟಕದ ಅಭಿವೃದ್ಧಿಗೆ ಮಾರಕವಾಗಲಿದ್ದು, ಕಾರ್ಮಿಕ ಸಂಹಿತೆಗಳನ್ನು ವಾಪಸು ಪಡೆಯಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಎ.ಆರ್.ಬಾಬು, ಬಿ.ಎಲ್.ಕೇಶವರಾವ್, ಎಂ.ಭೀಮರಾಜ್, ಆಂಜಲಮ್ಮ, ಕಲ್ಪನಾ, ಶಿವಾನಂದ್, ವೀರಭದ್ರ, ಜಯಲಕ್ಷ್ಮೀ, ಅಮರನಾರಾಯಣ, ಲಿಯೋ ರಾಜ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-18-515668206

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.