ಕೋಲಾರ: ಸೇವೆ ಕಾಯಂ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರ ಮುಷ್ಕರ 56ನೇ ದಿನಕ್ಕೆ ಕಾಲಿಟ್ಟಿದೆ. ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ.

ನಗರದ ತಾಲ್ಲೂಕು ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಶ್ರೀನಿವಾಸ್ ಮೂರ್ತಿ ಅವರಿಗೆ ಸೋಮವಾರ ಮನವಿ ಸಲ್ಲಿಸಿ, ಪ್ರತಿಭಟನೆ ಮುಂದುವರಿಸಿದರು.

ಜಿಲ್ಲಾ ಸರ್ಕಾರಿ ಪರವಾನಗಿ ಭೂ ಮಾಪಕರ ಸಂಘದ ಅಧ್ಯಕ್ಷ ಕೆ.ಶಿವಾನಂದ ಮಾತನಾಡಿ, ‘ಸರ್ಕಾರದ ಪರವಾನಗಿ ಪಡೆದು ಸೇವೆ ಸಲ್ಲಿಸುತ್ತಿರುವ ಭೂ ಮಾಪಕರಿಗೆ ಸೇವಾ ಭದ್ರತೆ ಇಲ್ಲ. ಸರ್ಕಾರಿ ಭೂ ಮಾಪಕರಂತೆ ಸಮಾನ ಕೆಲಸ ಮಾಡುತ್ತಿರುವ ನಮಗೆ ಸಮಾನ ವೇತನ ನೀಡಬೇಕು. ಜೊತೆಗೆ ಸೇವೆ ಕಾಯಂ ಮಾಡಬೇಕು’ ಎಂದು ಒತ್ತಾಯಿಸಿದರು.

ಕರ್ತವ್ಯ ನಿರ್ವಹಿಸದೆ ಪ್ರತಿಭಟನೆ ನಡೆಸುತ್ತಿರುವ ನಮ್ಮನ್ನು ಅಮಾನತು ಮಾಡುವುದಾಗಿ ಸರ್ಕಾರ ಅಧಿಸೂಚನೆ ಹೊರಡಿಸಿದ್ದರಿಂದ ಜಿಲ್ಲೆಯಲ್ಲಿನ ಜಮೀನಿನ ಹದ್ದುಬಸ್ತು, ಪೋಡಿ, 11 ಇ, ಭೂ ಪರಿವರ್ತನೆ ಒಳಗೊಂಡಂತೆ ಇರುವ ಅರ್ಜಿಗಳ ವಿಲೇವಾರಿ ಮಾಡಿದ್ದೇವೆ. ನಮ್ಮ ಕರ್ತವ್ಯ ಸಂಪೂರ್ಣ ಗೊಳಿಸಿ, ಬಾಕಿ ಅರ್ಜಿಗಳ ವಿವರವನ್ನು ಮೇಲಧಿಕಾರಿಗಳಿಗೆ ತಿಳಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಬಗ್ಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸಮಜಾಯಿಷಿ ನೀಡಿದ್ದೇವೆ ಎಂದರು.

ಸಂಘದ ಕೋಲಾರ ತಾಲ್ಲೂಕು ಅಧ್ಯಕ್ಷ ವಸಂತ್ ಕುಮಾರ್, ಮಾಲೂರು ಅಧ್ಯಕ್ಷ ಚೆಲುವಯ್ಯ ಸ್ವಾಮಿ, ಬಂಗಾರಪೇಟೆ ಅಧ್ಯಕ್ಷ ಪಾಂಡುರಂಗಯ್ಯ, ಮುಳಬಾಗಿಲು ಅಧ್ಯಕ್ಷ ಸೋಮಶೇಖರಯ್ಯ, ಶ್ರೀನಿವಾಸಪುರ ಅಧ್ಯಕ್ಷ ವೇಣು, ಭೂ ಮಾಪಕರಾದ ಪಲ್ಲವಿ, ಸುಚಿತ್ರ, ರವಿಕುಮಾರ್, ಜಿ.ಆರ್.ಮಂಜುನಾಥ್, ಮುರಳಿ, ಸುರೇಶ್, ಚಕ್ರವರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-18-1195992895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.