ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಲೋಕಸಭಾ ಕ್ಷೇತ್ರ | ಕೆಜಿಎಫ್‌ನಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ

Published 4 ಜೂನ್ 2024, 15:56 IST
Last Updated 4 ಜೂನ್ 2024, 15:56 IST
ಅಕ್ಷರ ಗಾತ್ರ

ಕೆಜಿಎಫ್‌: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದರೂ, ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಗಣನೀಯ ಪ್ರಮಾಣದಲ್ಲಿ ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯು ಮೈತ್ರಿ ಅಭ್ಯರ್ಥಿಗಿಂತ 33 ಸಾವಿರಕ್ಕೂ ಹೆಚ್ಚು ಮತಗಳನ್ನು ಗಳಿಸಿ ಪ್ರಾಬಲ್ಯ ಮೆರೆದಿದ್ದಾರೆ.

ಕೆಜಿಎಫ್‌ ವಿಧಾನಸಭೆ ಕ್ಷೇತ್ರದಲ್ಲಿ ಮೊದಲಿನಿಂದಲೂ ಜೆಡಿಎಸ್ ಪಕ್ಷಕ್ಕೆ ಕಾರ್ಯಕರ್ತರ ಕೊರತೆ ಇದೆ. ವಿಧಾನಸಭೆ ಚುನಾವಣೆಯಲ್ಲಿ ಕೇವಲ 1,360 ಮತಗಳನ್ನು ಪಡೆದಿತ್ತು. ಈ ಬಾರಿ ಬಿಜೆಪಿಯನ್ನು ನೆಚ್ಚಿಕೊಂಡು ಚುನಾವಣೆ ಎದುರಿಸಿತ್ತು. ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹೆಚ್ಚಿನ ಮತಗಳನ್ನು ಗಳಿಸಿದ್ದರೂ, ಕಳೆದ ವಿಧಾನಸಭೆ ಚುನಾವಣೆಗೆ ಹೋಲಿಸಿದಲ್ಲಿ ಕಾಂಗ್ರೆಸ್ ಮತ ಪ್ರಮಾಣವು ಹೆಚ್ಚಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಒಟ್ಟು 80,914 ಮತಗಳನ್ನು ಗಳಿಸಿದ್ದು, ಈ ಬಾರಿ ಮತಗಳ ಸಂಖ್ಯೆ 85,949ಕ್ಕೆ ಏರಿದೆ. ಆದರೆ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಕುಸಿದಿದೆ.

ವಿಧಾನಸಭೆ ಚುನಾವಣೆಯಲ್ಲಿ 23,939 ಮತಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ 39, 734 ಕ್ಕೆ ಮತಗಳನ್ನು ಪಡೆದಿದೆ. ಆದರೆ ನಗರ ಭಾಗದಲ್ಲಿ ಕಾಂಗ್ರೆಸ್‌ ಪಕ್ಷ ಉತ್ತಮ ಸಾಧನೆ ತೋರಿದೆ. ವಿಧಾನಸಭೆ ಚುನಾವಣೆಯಲ್ಲಿ 41,117 ಮತಗಳನ್ನು ಪಡೆದಿದ್ದ ಗಳಿಸಲು ಶಕ್ಯವಾದ ಕಾಂಗ್ರೆಸ್‌ ಈ ಬಾರಿ ತನ್ನ ಮತಗಳ ಸಂಖ್ಯೆಯನ್ನು 59, 720ಕ್ಕೆ ಏರಿಸಿಕೊಂಡಿದೆ.

ವಿಧಾನಸಭೆ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದಿದ್ದ ಆರ್‌ಪಿಐ ಪಕ್ಷವು 26,862 ಮತಗಳನ್ನು ನಗರದಲ್ಲಿ ಪಡೆದಿತ್ತು. ಆರ್‌ಪಿಐ ಮತಗಳು ಈ ಬಾರಿ ಕಾಂಗ್ರೆಸ್‌ಗೆ ಹೋಗಿದೆ ಎಂಬ ಲೆಕ್ಕಾಚಾರ ಇರುವುದರಿಂದ ಸಹಜವಾಗಿ ಕಾಂಗ್ರೆಸ್ ಪಕ್ಷದ ಮತಗಳು ನಗರ ಭಾಗದಲ್ಲಿ ಜಾಸ್ತಿಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT