ಕೋಲಾರ: ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ಜಿಲ್ಲೆಯ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರ ಕಚೇರಿ ಮೇಲೆ ಸೋಮವಾರ ದಾಳಿ ನಡೆಸಿ ಪ್ರಮುಖ ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.

ಅಲ್ಲದೇ, ತಾಲ್ಲೂಕಿನ ತಲಗುಂದ ಹಾಗೂ ತಲಗುಂದ ಪುರಹಳ್ಳಿ ಬಳಿ ಕಲ್ಲು ಗಣಿಗಾರಿಕೆ ಪರಿಶೀಲನೆ ನಡೆಸಿದ್ದು, ಅಕ್ರಮವಾಗಿ ನಡೆಸುತ್ತಿರುವುದು ಕಂಡುಬಂದಿದೆ ಎಂದಿದ್ದಾರೆ.

ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಆ್ಯಂಟನಿ ಜಾನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುನಿಲ್ ಕುಮಾರ್ ಬಿ. ನೇತೃತ್ವದಲ್ಲಿ ಈ ಶೋಧ ಕಾರ್ಯ ನಡೆದಿದೆ.

‘ವಕ್ಕಲೇರಿ ಹೋಬಳಿಯ ತಲಗುಂದ ಗ್ರಾಮದ ಸರ್ವೆ ನಂ.3 ಹಾಗೂ ಸುಗಟೂರು ಹೋಬಳಿಯ ತಲಗುಂದ ಪುರಹಳ್ಳಿ ಗ್ರಾಮದ ಸರ್ವೆ ನಂ.34ರ ಸುಮಾರು ಹತ್ತಾರು ಎಕರೆ ಸರ್ಕಾರಿ ಗುಡ್ಡ ಜಮೀನಿನಲ್ಲಿ ಹಲವು ವರ್ಷಗಳಿಂದ ಕಾನೂನುಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವನಾಗಿ ಅಥವಾ ಗುತ್ತಿಗೆ ಪಡೆಯದೆ ಕಂಪ್ರೆಷರ್ ವಾಹನ, ಕ್ರೇನ್, ಟ್ರಾಕ್ಟರ್, ಇನ್ನಿತರ ಯಂತ್ರೋಪಕರಣ ಹಾಗೂ ರಾಸಾಯನಿಕ ಬಳಕೆ ಮಾಡಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ವಹಿಸದೆ ಅಕ್ರಮ ಗಣಿಗಾರಿಕೆಗೆ ಪರೋಕ್ಷವಾಗಿ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಈ ಸಂಬಂಧ ಡಿವೈಎಸ್ಪಿ ಸುನಿಲ್ ಕುಮಾರ್ ಲೋಕಾಯುಕ್ತರಿಗೆ ವರದಿ ಸಲ್ಲಿಸಿದ್ದರು. ಇದರ ಆಧಾರದ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಸೂಚನೆಯಂತೆ ಈ ಶೋಧ ಕಾರ್ಯ ನಡೆದಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಗಣಿ ಇಲಾಖೆ ಕಚೇರಿ ಅಲ್ಲದೇ; ಅನಧಿಕೃತವಾಗಿ ನಡೆಯುತ್ತಿದೆ ಎನ್ನಲಾದ ಕಲ್ಲು ಗಣಿಗಾರಿಕೆ ಸ್ಥಳಕ್ಕೂ ಸುನಿಲ್ ಕುಮಾರ್ ಹಾಗೂ ಅವರ ತಂಡ ತೆರಳಿ ಶೋಧ ಕಾರ್ಯ ನಡೆಸಿದೆ. ದಾಖಲೆ ಪರಿಶೀಲನೆ ವೇಳೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು ಗೊತ್ತಾಗಿದೆ ಎಂದು ಹೇಳಿದ್ದಾರೆ.

ಗಣಿ ಇಲಾಖೆ ಕಚೇರಿಯಲ್ಲಿನ ಪ್ರಮುಖ ಕಡತಗಳನ್ನು ವಶಕ್ಕೆ ಪಡೆದಿದ್ದು, ಅಕ್ರಮ ಗಣಿಗಾರಿಕೆ ಸಂಬಂಧ ಕ್ರಮ ವಹಿಸಲು ಸೂಚನೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-18-1976860647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.