ಕೋಲಾರ: ಜೂನ್ 8ಕ್ಕೆ ಮಾಲೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹಾಗೂ ಜಿಲ್ಲಾಧಿಕಾರಿ ಎಂ.ಆರ್.ರವಿ ನೇತೃತ್ವದಲ್ಲಿ ಗುರುವಾರ ಜಿಲ್ಲಾಡಳಿತ ಭವನದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

ಮುಖ್ಯಮಂತ್ರಿಯು ಜಿಲ್ಲೆಗೆ ಆಗಮಿಸುತ್ತಿರುವುದು ನಮಗೆ ಸಿಕ್ಕ ಗೌರವ. ಇದರಲ್ಲಿ ಯಾವುದೇ ಇಲಾಖೆಯ ಅಧಿಕಾರಿಗಳು ಅಥವಾ ನೌಕರರು ಬೇಜವಾಬ್ದಾರಿತನ ತೋರಿದರೆ ಸಹಿಸುವುದಿಲ್ಲ. ಪ್ರತಿಯೊಬ್ಬರೂ ಸಂಪೂರ್ಣ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂ.ಆರ್.ರವಿ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿ ಕಾರ್ಯಕ್ರಮದ ಸಿದ್ಧತೆಯಲ್ಲಿ ಕೆಲವು ಇಲಾಖೆಗಳ ನಿರಾಸಕ್ತಿ ಗಮನಿಸಿದ ಹಿನ್ನೆಲೆಯಲ್ಲಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಮಗೆ ಜವಾಬ್ದಾರಿ ವಹಿಸಿಲ್ಲ, ನಾವ್ಯಾಕೆ ಬರಬೇಕು, ನಮಗೂ ಇದಕ್ಕೂ ಸಂಬಂಧವಿಲ್ಲ ಎಂಬ ಧೋರಣೆಯನ್ನು ಯಾವುದೇ ಅಧಿಕಾರಿಗಳು ತಾಳಬಾರದು. ಜಿಲ್ಲಾಡಳಿತದ ಪ್ರತಿಯೊಂದು ವಿಭಾಗದ ಅಧಿಕಾರಿಗಳು ಮತ್ತು ನೌಕರರು ಇದರಲ್ಲಿ ಸಂಪೂರ್ಣವಾಗಿ ಭಾಗಿಯಾಗಬೇಕು. ಜನರನ್ನು ಸುಮ್ಮನೆ ಕರೆತಂದು ನಿಲ್ಲಿಸುವುದಲ್ಲ, ಅವರಿಗೆ ಸರಿಯಾದ ಸೌಲಭ್ಯ ಸಿಗುವಂತೆ ನೋಡಿಕೊಳ್ಳುವುದು ತಮ್ಮ ಜವಾಬ್ದಾರಿ ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿ ವಿವಿಧ ಯೋಜನೆಗಳಡಿ ಒಟ್ಟು ₹ 26,627 ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಗುರಿ ಹೊಂದಲಾಗಿದೆ. ಸಮಾವೇಶದ ಒಟ್ಟು ಯೋಜನೆಗಳ ಅಂದಾಜು ವೆಚ್ಚ ₹ 2,077 ಕೋಟಿಗೂ ಅಧಿಕವಾಗಿದೆ. ಒಟ್ಟು 59 ಕಾಮಗಾರಿಗಳ ಉದ್ಘಾಟನೆ (ವೆಚ್ಚ: ₹ 30,431 ಲಕ್ಷ ) ಹಾಗೂ 29 ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಲಿದೆ ಎಂದರು.

'ಗೃಹ ಆರೋಗ್ಯ' ಯೋಜನೆಯಡಿ ಮನೆಬಾಗಿಲಿಗೆ ಚಿಕಿತ್ಸೆ ಪಡೆದ ಕನಿಷ್ಠ 1,000 ಜನರನ್ನು ಆಶಾ ಕಾರ್ಯಕರ್ತೆಯರ ಮೂಲಕ ಸಮಾವೇಶಕ್ಕೆ ಕರೆತರಲು ನಿರ್ದೇಶನ ನೀಡಲಾಯಿತು.

ಕೆ. ವೈ.ನಂಜೇಗೌಡ ಮಾತನಾಡಿ, ‘ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು, ನೆರಳು ಮತ್ತು ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಡಳಿತದೊಂದಿಗೆ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು’ ಎಂದರು

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾಪ್ರಸಾದ್ ದಿಲೀಪ್, ಮಾಲೂರು ತಹಶೀಲ್ದಾರ್ ರೂಪಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-18-1279365096

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.