ಕೋಲಾರ: ಮಾಲೂರು ತಾಲ್ಲೂಕಿನ ನಕ್ಕನಹಳ್ಳಿ ಗ್ರಾಮಕ್ಕೆ ಸೋಮವಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ನೆರವು ಘೋಷಿಸಿದರು.

ಗ್ರಾಮದ ಕೃಷಿ ಹೊಂಡದಲ್ಲಿ ಭಾನುವಾರ ಈಜಲು ಹೋಗಿದ್ದ ಶ್ರೀನಿವಾಸ್ (45), ಅವರ ಇಬ್ಬರು ಗಂಡು ಮಕ್ಕಳಾದ ಚೇತನ್ (15) ಹಾಗೂ ರಾಜೇಶ್ (9) ಮೃತಪಟ್ಟಿದ್ದರು.

ಮೃತರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರ ಅಳಲನ್ನು ಆಲಿಸಿದ ಜಿಲ್ಲಾಧಿಕಾರಿ, ತಕ್ಷಣವೇ ಜಾರಿಗೆ ಬರುವಂತೆ ಕೆಲ ಆದೇಶ ಮಾಡಿದರು

ಮೃತ ಶ್ರೀನಿವಾಸ್ ಅವರ ಪತ್ನಿಗೆ ತಕ್ಷಣವೇ 'ವಿಧವಾ ವೇತನ' ಮಂಜೂರು ಮಾಡುವಂತೆ ಸ್ಥಳದಲ್ಲಿದ್ದ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು. ಕುಟುಂಬವು ವಾಸವಿರುವ ಅಪೂರ್ಣಗೊಂಡಿರುವ ಮನೆಯನ್ನು ಪೂರ್ಣಗೊಳಿಸಲು ಗ್ರಾಮ ಪಂಚಾಯಿತಿಯಿಂದ ಬೇಕಾದ ಅಗತ್ಯ ಮೂಲಸೌಲಭ್ಯ ಹಾಗೂ ಅನುದಾನ ಒದಗಿಸುವಂತೆ ಪಂಚಾಯತ್ ರಾಜ್ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು.

ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ಮೂರು ದಿನಗಳೊಳಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಮುಖಾಂತರ ವಿದ್ಯಾರ್ಥಿಗಳ ಕಲ್ಯಾಣ ನಿಧಿಯಿಂದ ತಲಾ ₹ 1.25 ಲಕ್ಷ (ಒಟ್ಟು ₹ 2.50 ಲಕ್ಷ ) ಪರಿಹಾರ ಧನವನ್ನು ಕೊಡಿಸಲು ಅಧಿಕಾರಿಗಳಿಗೆ ಆದೇಶಿಸಿದರು.

ದುರಂತ ಸ್ಥಳವನ್ನು ಪರಿಶೀಲಿಸಿದ ನಂತರ ಮಾತನಾಡಿದ ಎಂ.ಆರ್.ರವಿ, ಜಿಲ್ಲೆಯಲ್ಲಿ ಕೃಷಿ ಹೊಂಡಗಳ ಸುರಕ್ಷತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪುನರುಚ್ಚರಿಸಿದರು.

ಜಿಲ್ಲೆಯ ಎಲ್ಲಾ ಅಸುರಕ್ಷಿತ ಕೃಷಿ ಹೊಂಡಗಳಿಗೆ ಮುಂದಿನ ಏಳು ದಿನಗಳ ಒಳಗಾಗಿ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸಬೇಕು. ಇಲ್ಲವಾದಲ್ಲಿ ಅಂತಹ ಹೊಂಡಗಳನ್ನು ಮುಚ್ಚಲು ಈಗಾಗಲೇ ಆದೇಶಿಸಿದ್ದೇನೆ ಎಂದರು.

ಹೊಂಡಗಳ ಬಳಿ ಕೇವಲ ಎಚ್ಚರಿಕೆ ಫಲಕ ಮಾತ್ರವಲ್ಲದೆ; ಆ ಹೊಂಡದ ಆಳ ಮತ್ತು ಅಗಲದ ನಿಖರ ಮಾಹಿತಿ ಹೊಂದಿರುವ ಫಲಕಗಳನ್ನು ಅಳವಡಿಸಬೇಕು. ಇದರಿಂದ ನೀರಿನ ಆಳದ ಅರಿವಿಲ್ಲದೆ ಹೊಂಡಕ್ಕೆ ಇಳಿಯುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.

ದುರ್ಘಟನೆ ನಡೆದ 24 ಗಂಟೆಗಳ ಒಳಗಾಗಿ ಸ್ಥಳಕ್ಕೆ ಭೇಟಿ ನೀಡಿ, ಬಡ ಕುಟುಂಬಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ವಿಧವಾ ವೇತನ, ಮನೆ ನಿರ್ಮಾಣ ಹಾಗೂ ಶಿಕ್ಷಣ ಇಲಾಖೆಯ ಪರಿಹಾರ ಘೋಷಿಸಿದ ಜಿಲ್ಲಾಧಿಕಾರಿ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

ಈ ವೇಳೆ ಮಾಲೂರು ತಹಶೀಲ್ದಾರ್ ರೂಪಾ ಹಾಗೂ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-18-1271766533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.