ಮಾಲೂರು: ಐದು ವರ್ಷಗಳ ಹಿಂದೆ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ದೊಡ್ಡ ಕಲ್ಲಹಳ್ಳಿ ಗ್ರಾಮದಿಂದ ಮಾಸ್ತಿ ಮುಖ್ಯರಸ್ತೆಗೆ ಸಂಪರ್ಕಿಸುವ ರಸ್ತೆ ಅಗೆದು ಒಂದು ವರ್ಷದ ಹಿಂದೆ ಜಲ್ಲಿಕಲ್ಲು ಹಾಕಿದ್ದು, ಕಾಮಗಾರಿ ಪೂರ್ಣಗೊಳ್ಳದ ಕಾರಣ ಗ್ರಾಮಸ್ಥರು ಹಾಗೂ ವಾಹನ ಸವಾರರು ಹೈರಾಣಾಗಿದ್ದಾರೆ.

ದೊಡ್ಡ ಕಲ್ಲಹಳ್ಳಿ ಗ್ರಾಮದಿಂದ ಮಾಸ್ತಿ ಗ್ರಾಮದ ಮುಖ್ಯರಸ್ತೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಗುತ್ತಿಗೆಗೆ ಪಡೆದ ಗುತ್ತಿಗೆದಾರ ಕಳೆದ ವರ್ಷ ರಸ್ತೆ ಅಗೆದು ಜಲ್ಲಿ ಹಾಕಿದ್ದರು. ನಂತರ, ಇದುವರೆಗೂ ಈ ಕಡೆ ಮುಖ ಮಾಡಿಲ್ಲ. ಪ್ರತಿದಿನ ಈ ಜಲ್ಲಿ ಕಲ್ಲುಗಳ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ. ಈಗಾಗಲೇ ಈ ರಸ್ತೆಯಲ್ಲಿ ಹಲವು ಮಂದಿ ಬಿದ್ದು ಕೈ ಕಾಲು ಮುರಿದುಕೊಂಡಿದ್ದಾರೆ. ಆದರೂ ಯಾರೂ ಎಚ್ಚೆತ್ತು ರಸ್ತೆ ಅಭಿವೃದ್ಧಿಪಡಿಸಿಲ್ಲ. ಈಗಾಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-18-1106645178

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.