ಮಾಲೂರು (ಕೋಲಾರ): ತಾಲ್ಲೂಕಿನ ಮಾಸ್ತಿ ಹೋಬಳಿಯ ಕೊತ್ತೂರು ಗ್ರಾಮದಲ್ಲಿ ನೀರಿನ ಹೊಂಡಕ್ಕೆ ಬಿದ್ದು ಸೋಮವಾರ ಮತ್ತಿಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಗ್ರಾಮದ ವೆಂಕಟೇಶಪ್ಪ ಎಂಬುವರ ಮೊಮ್ಮಕ್ಕಳಾದ ದೇವಕಿರಣ್ (12) ಹಾಗೂ ವಿನೀತ್ ಕುಮಾರ್ (9) ನೀರು ಪಾಲಾದವರು. ಶಾಲೆಗೆ ಬೇಸಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈ ಮಕ್ಕಳು ತಾತನ ಮನೆಗೆ ಬಂದಿದ್ದರು. ಬಿಸಿಲಧಗೆ ಕಾರಣ ಈ ಹೊಂಡದಲ್ಲಿ ಈಜಲು ಹೋಗಿದ್ದರು ಎಂಬುದು ಗೊತ್ತಾಗಿದೆ.

ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಸಮೀಪದ ಬಗ್ಗಟ್ಟಿ ಗ್ರಾಮದ ವಾಸಿಗಳಾದ ಭಾಗ್ಯಮ್ಮ ಹಾಗೂ ಚಂದ್ರಪ್ಪ ಎಂಬುವರ ಪುತ್ರನಾದ ದೇವಕಿರಣ್ ಬೆಂಗಳೂರಿನ ರಾಮಮೂರ್ತಿ ನಗರದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದ.

ಅಶ್ವತಪ್ಪ ಮತ್ತು ಗೌರಮ್ಮ ಪುತ್ರನಾದ ವಿನೀತ್ ಕುಮಾರ್ ಬಂಗಾರಪೇಟೆ ಸರ್ಕಾರಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ.

ಜಿಲ್ಲೆಯಲ್ಲಿ ಈಚೆಗೆ ಕೃಷಿ ಹೊಂಡಕ್ಕೆ ಬಿದ್ದು ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 20 ದಿನಗಳಲ್ಲಿ ಏಳು ಮಂದಿ ನೀರು ಪಾಲಾಗಿದ್ದರು. ಈಗ ಮತ್ತಿಬ್ಬರ ಮಕ್ಕಳು ಮೃತಪಟ್ಟಿದ್ದಾರೆ. ಆದರೆ, ಈ ಮಕ್ಕಳು ಬಿದ್ದು ಮೃತಪಟ್ಟಿರುವುದು ಕೃಷಿ ಹೊಂಡದಲ್ಲಿ ಅಲ್ಲ; ಇಂಗು ಗುಂಡಿಯಲ್ಲಿ ಎಂದು ಸ್ಥಳೀಯರು ಹೇಳಿದ್ದಾರೆ.

ವಾರದ ಹಿಂದೆಯಷ್ಟೇ ತಾಲ್ಲೂಕಿನ ಟೇಕಲ್ ಹೋಬಳಿಯ ನಕ್ಕನಹಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ತಂದೆ ಹಾಗೂ ಗಂಡು ಮಕ್ಕಳಿಬ್ಬರು ನೀರು ಪಾಲಾಗಿದ್ದರು.

ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಆರ್.ರವಿ ಎಚ್ಚರಿಕೆ ನೀಡಿದ್ದರು. ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-18-2041525241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.