ಕೋಲಾರ: ಮಾಲೂರು ತಾಲ್ಲೂಕಿನ ಕಸಬಾ ಹೋಬಳಿ ಬೆಳ್ಳಾವಿ ಗ್ರಾಮದಲ್ಲಿ ಸರ್ಕಾರಿ ಜಮೀನು ಸಂಬಂಧ ಅಕ್ರಮವಾಗಿ ದಾಖಲೆ ಸೃಷ್ಟಿಸಿಕೊಂಡು ಕಬಳಿಸಲು ಯತ್ನಿಸಿರುವ ಆರೋಪದಡಿ ಮೂವರ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಾಲೂರು ತಹಶೀಲ್ದಾರ್ ರೂಪಾ ದೂರು ನೀಡಿದ್ದಾರೆ. ಬೆಳ್ಳಾವಿ ನಿವಾಸಿಗಳಾದ ಅಬ್ದುಲ್ ಗಫಾರ್, ಜ್ಯೋತಿ ಪ್ರಕಾಶ್, ಮಂಜುನಾಥಚಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ಳಾವಿ ಗ್ರಾಮದಲ್ಲಿ ಮೂರು ಎಕರೆ ಜಮೀನನ್ನು ಆರೋಪಿಗಳು ತಲಾ 1 ಎಕರೆ ಮಂಜೂರು ಆಗಿರುವುದಾಗಿ ದುರಸ್ತಿ ಮಾಡುವ ಸಲುವಾಗಿ ಅಲಾಯಿದೆಯಾಗಿ ಅರ್ಜಿಗಳನ್ನು ತಹಶೀಲ್ದಾರ್ ಕಚೇರಿಗೆ ಸಲ್ಲಿಸಿದ್ದರು. ಈ ಸಂಬಂಧ ಶಿರಸ್ತೇದಾರ್, ರಾಜಸ್ವ ನಿರೀಕ್ಷ, ಗ್ರಾಮ ಲೆಕ್ಕಾಧಿಕಾರಿ ಮಂಜೂರು ಮಾಡಿ, ದುರಸ್ತಿ ಮಾಡಿದಂತೆ ಎಲ್ಲಾ ದಾಖಲೆಗಳನ್ನು ತಾಲೂಕು ಕಚೇರಿ ಎಲ್ಎನ್ಡಿ/ಸಿಆರ್/7845 / 85 & 86 ಕಡತ ಮತ್ತು ಸರ್ವೇ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ದಾಖಲೆಗಳಲ್ಲಿರುವ ಸಹಿಗಳು ಸಹ ಪೋರ್ಜರಿಯಾಗಿದ್ದು ಯಾವುದೇ ಪತ್ರ ವ್ಯವಹಾರ ಸಹ ನಡೆದಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಜಮೀನು ಕಬಳಿಸಲು ಯತ್ನಿಸಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಲು ರೂಪಾ ಮೇ 14ರಂದು ದೂರು ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-18-865994572

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.