ಮಾಲೂರು: ತಾಲ್ಲೂಕಿನ ಕಸಬಾ ಹೋಬಳಿಯ ರಾಜಸ್ವ ನಿರೀಕ್ಷಕ ಯಾರ ಕೈಗೂ ಸಿಗುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಶಿರಸ್ತೇದಾರ್ ಅಶ್ವತ್ಥನಾರಾಯಣ್ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಡಿಎಸ್ಎಸ್ ತಾಲ್ಲೂಕು ಸಂಚಾಲಕ ಎಸ್.ಎಂ.ವೆಂಕಟೇಶ್ ಮಾತನಾಡಿ, ತಾಲ್ಲೂಕು ಕಸಬಾ ಹೋಬಳಿಯ ರಾಜಸ್ವ ನಿರೀಕ್ಷಕ ಕಚೇರಿಯಲ್ಲಿ ಸಾರ್ವಜನಿಕರಿಗೆ ಸಿಗುವುದಿಲ್ಲ. ಇವರನ್ನು ಸಂಪರ್ಕಿಸಲು ದೂರವಾಣಿ ಕರೆ ಮಾಡಿದರು ಸ್ವೀಕರಿಸುವುದಿಲ್ಲ. ನಗರದಲ್ಲಿ ರಿಯಲ್ ಎಸ್ಟೇಟ್ ಕಚೇರಿ ಮಾಡಿಕೊಂಡು ಭೂಗಳ್ಳರ ಜೊತೆ ಸೇರಿ ಸರ್ಕಾರಿ ಜಮೀನುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಖಾತೆ ಮಾಡುವುದರಲ್ಲಿ ನಿರತರಾಗಿದ್ದಾರೆಂದು ಆರೋಪಿಸಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗಾಗಿ ಕಚೇರಿಗೆ ಹೋಗುವ ರೈತರು, ವೃದ್ಧರು, ಅಂಗವಿಕಲರು ಇವರನ್ನು ಭೇಟಿ ಮಾಡುವುದೇ ಕಷ್ಟವಾಗಿದೆ. ಹಾಗಾಗಿ ಮಾಲೂರು ತಾಲ್ಲೂಕು ಕಸಬಾ ಹೋಬಳಿಯ ರಾಜಸ್ವ ನಿರೀಕ್ಷಕ ತಾಲ್ಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಡಿ.ಎನ್.ನಾರಾಯಣಸ್ವಾಮಿ, ಬಿಳಿ ರಾಗಿ ಶಾಮಣ್ಣ, ಮುನಿರಾಜು, ಮಾಸ್ತಿ ವೆಂಕಟೇಶಪ್ಪ, ಬಂಡೆಹಟ್ಟಿ ನಾರಾಯಣಸ್ವಾಮಿ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-18-467728997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.