ಮಾಲೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಪ್ರಯುಕ್ತ ಜಿಲ್ಲೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಒಟ್ಟು ₹5ಕೋಟಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಮಾಲೂರು ನಗರದ ಭವನ ನಿರ್ಮಾಣಕ್ಕೆ ₹2ಕೋಟಿ ಮೀಸಲು ಇಡಲಾಗಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.

ನಗರದ ವಿಕಾಸಸೌಧ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನಗರದಲ್ಲಿ ಸೂಕ್ತ ಸ್ಥಳ ಗುರುತಿಸಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಜಯಂತಿಯನ್ನು ಪ್ರತಿ ವರ್ಷದಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.

ಸಭೆಯಲ್ಲಿ ಗದ್ದಲ: ದಲಿತ ಮುಖಂಡರಾದ ಎಸ್.ಎಂ.ವೆಂಕಟೇಶ್ ಮತ್ತು ಸಂತೋಷ್ ಮಾತನಾಡಿ, ಏಳು ವರ್ಷಗಳಲ್ಲಿ ಒಂದು ಅಟ್ರಾಸಿಟಿ ಸಭೆ ನಡೆಸಿಲ್ಲ. ದಲಿತರ ಸಮಸ್ಯೆ ಬಗ್ಗೆ ಚರ್ಚೆಯೇ ಇಲ್ಲ. ಸಮಸ್ಯೆ ಹೇಳಿಕೊಳ್ಳಲೂ ಅವಕಾಶ ಕೊಡುತ್ತಿಲ್ಲ. ಶಾಸಕರು ಜಾತಿವಾದಿಗಳನ್ನು ತಮ್ಮ ಪಕ್ಕದಲ್ಲಿಟ್ಟುಕೊಂಡಿದ್ದು, ದಲಿತ ವಿರೋಧಿ ಆಡಳಿತ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹನುಮಂತನಗರದಲ್ಲಿರುವ ಹಳೆ ಅಂಬೇಡ್ಕರ್ ಭವನ ಕಟ್ಟಡಕ್ಕೆ ಮೂಲಸೌಕರ್ಯ ಒದಗಿಸಬೇಕು. ಹೊಸ ಕಟ್ಟಡ ನಿರ್ಮಾಣಕ್ಕೆ ₹2ಕೋಟಿ ವೆಚ್ಚವಾಗಲಿದ್ದು, ಅದಕ್ಕೆ ಸಾಕಷ್ಟು ಸಮಯ ಬೇಕಾಗುತ್ತದೆ. ಸದ್ಯಕ್ಕೆ ಬಡವರು, ದಲಿತರು ತಮ್ಮ ಮದುವೆ ನಡೆಸಿಕೊಳ್ಳಲು ಹಳೆ ಕಟ್ಟಡಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ತಾಲೂಕಿನ ಎಸ್ಸಿ ಎಸ್ಟಿ ಮತ್ತು ಹಿಂದುಳಿದ ಸಮುದಾಯಗಳ ಮೇಲೆ ಕಾಳಜಿ ಇಲ್ಲದಾ ಶಾಸಕರು ತಾಲೂಕಿನಲ್ಲಿ ದಲಿತ ವಿರೋಧಿ ಆಡಳಿತ ನಡೆಸುತ್ತಿದ್ದಾರೆ.

ಎಸ್ಸಿ ವರ್ಗದ ಸಂತೇಹಳ್ಳಿ ನಾರಾಯಣಸ್ವಾಮಿ ಅವರನ್ನು ಮಾಸ್ತಿ ಬ್ಲಾಕ್ ದರ್ಖಾಸ್ತು ಸಮಿತಿ ಅಧ್ಯಕ್ಷರಾಗಿ ಮಾಡಿ ಎರಡು ವರ್ಷಗಳು ಕಳೆದರೂ ಇಲ್ಲಿಯವರೆಗೂ ಒಂದು ಸಭೆ ಮಾಡಿಲ್ಲ ಎಂದು ದೂರಿದರು.

ಶಾಸಕರ ಬೆಂಬಲಿಗರು ಮತ್ತು ದಲಿತ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.

ನಂತರ ಶಾಸಕರು ದಲಿತ ಮುಖಂಡರನ್ನು ಸಮಾಧಾನಪಡಿಸಿ, ಪ್ರತಿ ಎರಡು ತಿಂಗಳಿಗೊಮ್ಮೆ ನಗರದಲ್ಲಿ ಅಟ್ರಾಸಿಟಿ ಸಭೆ ನಡೆಸುವಂತೆ ತಹಶೀಲ್ದಾರ್ ರೂಪ ಅವರಿಗೆ ಸೂಚಿಸಿದರು.

ತಹಶೀಲ್ದಾರ್ ಎಂ.ವಿ ರೂಪ, ಇಒ ಕೃಷ್ಣಪ್ಪ, ಸರ್ಕಲ್ ಇನ್ಸ್ಟೆಕ್ಟರ್ ರಾಮಪ್ಪ ಗುತ್ತೇದಾರ, ನಗರ ಪ್ರಾಧಿಕಾರದ ಅಧ್ಯಕ್ಷ ವಿಜಯನಾರಸಿಂಹ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುನೇಗೌಡ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಆಂಜಿನಪ್ಪ, ವೆಂಕಟರಾಮ್ ಸೇರಿದಂತೆ ದಲಿತ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-18-1184205585

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.