ಕೋಲಾರ: ಮಾಲೂರು ಕೆಐಎಡಿಬಿ ಪ್ರದೇಶ ಕೈಗಾರಿಕಾ ಸಂಘ ಹಾಗೂ ಐಎಫ್ಬಿ ಇಂಡಸ್ಟ್ರೀಸ್ ಲಿಮಿಟೆಡ್ ಜಂಟಿಯಾಗಿ ಮಾಲೂರಿನ ಇಂಡಸ್ಟ್ರೀಸ್ ಕ್ಯಾಂಪಸ್ನಲ್ಲಿ ವಿವಿಧ ಕೈಗಾರಿಕೆಗಳ ಎಚ್ಆರ್ ಅಧಿಕಾರಿಗಳು ಹಾಗೂ ಕಾರ್ಮಿಕರಿಗೆ ಮಾದಕ ವಸ್ತುಗಳ ಸೇವನೆ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದವು.

ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್.ವರಲಕ್ಷ್ಮಿ ಮಾತನಾಡಿ, ಡ್ರಗ್ಸ್ ನಿಷೇಧಕ್ಕೆ ಸಂಬಂಧಿಸಿದಂತೆ ಪ್ರತಿ ಕಾರ್ಖಾನೆಯಲ್ಲಿ ಕಡ್ಡಾಯವಾಗಿ ಮಾದಕ ದ್ರವ್ಯ ವಿರೋಧಿ ಸಮಿತಿ ರಚನೆ ಮಾಡಬೇಕು. ಈ ಸಮಿತಿಗಳು ಸಭೆ ನಡೆಸುವುದರ ಮೂಲಕ ಕಾರ್ಮಿಕರಿಗೆ ಅರಿವು ಮೂಡಿಸಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮೇಶ್, ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು, ತಡೆಗಟ್ಟುವ ವಿಧಾನ ಮತ್ತು ಮಕ್ಕಳನ್ನು ಮಾದಕ ವಸ್ತುಗಳ ಚಟಕ್ಕೆ ಒಳಗಾಗದಂತೆ ನೋಡಿಕೊಳ್ಳುವುದರ ಬಗ್ಗೆ ವಿವರಿಸಿದರು.

ಮಾಲೂರು ಸರ್ಕಲ್ ಇನ್ಸ್ಪೆಕ್ಟರ್ ರಾಮಪ್ಪ ಬಿ.ಗಟ್ಟರ್ ಮಾತನಾಡಿ, ‘ಹೊರ ರಾಜ್ಯದಿಂದ ಬಂದಂತಹ ಕಾರ್ಮಿಕರು ಅತಿ ಹೆಚ್ಚಾಗಿ ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಒಳಗಾಗುತ್ತಾರೆ. ಮಾಲೂರು ತಾಲ್ಲೂಕನ್ನು ಮಾದಕ ವಸ್ತುಗಳ ವ್ಯಸನ ಮುಕ್ತ ತಾಲ್ಲೂಕನ್ನಾಗಿ ಮಾಡಲು ಶ್ರಮಿಸಲಾಗುತ್ತಿದೆ. ಮಾದಕ ವ್ಯಸನದ ವಿಚಾರ ಗೊತ್ತಾದರೆ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಬೇಕು’ ಎಂದು ಮನವಿ ಮಾಡಿದರು.

ಐಎಫ್ಬಿ ಇಂಡಸ್ಟ್ರೀಸ್ನ ಸಿಇಒ ಕೆ.ಆರ್.ಕೆ.ಪ್ರಸಾದ್, ‘ತಮ್ಮ ಘಟಕದಲ್ಲಿ ಕಟ್ಟುನಿಟ್ಟಾದ ನಿಯಮಗಳನ್ನು ಅನುಸರಿಸಲಾಗುತ್ತಿದೆ. ಮಾಲೂರು ಕೈಗಾರಿಕಾ ಪ್ರದೇಶವನ್ನು ಮಾದಕ ದ್ರವ್ಯಗಳಿಂದ ಮುಕ್ತವಾಗಿಡಲು ಅಧಿಕಾರಿಗಳು ಮಾಡುವ ಪ್ರಯತ್ನಗಳಲ್ಲಿ ಸಂಪೂರ್ಣ ಬೆಂಬಲ ನೀಡಲಾಗುತ್ತದೆ’ ಎಂದರು.

ಎಂಕೆಎಐಎ ಅಧ್ಯಕ್ಷ ಶ್ರೀಪ್ರಕಾಶ್ ಅವರು ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದರು. ಮಾದಕ ದ್ರವ್ಯ ಸೇವನೆ ತಡೆಗಟ್ಟುವಲ್ಲಿ ಕೈಗಾರಿಕೆಗಳ ಜವಾಬ್ದಾರಿಯನ್ನು ಒತ್ತಿ ಹೇಳಿದರು.

ಯಾವುದೇ ಮಾದಕ ದ್ರವ್ಯ ಸಂಬಂಧಿತ ಪ್ರಕರಣಗಳು ಅಥವಾ ಅನುಮಾನಾಸ್ಪದ ಚಟುವಟಿಕೆಗಳು ಗಮನಕ್ಕೆ ಬಂದರೆ ತಕ್ಷಣ ಅಧಿಕಾರಿಗಳಿಗೆ ತಿಳಿಸುವಂತೆ ಕಾರ್ಯಪಡೆಗೆ ಸೂಚಿಸಿದರು.

ಎಂಕೆಎಐಎ ಸಂಘವು ತನ್ನ ಸದಸ್ಯ ಕೈಗಾರಿಕೆಗಳೊಂದಿಗೆ ಆಯಾ ಘಟಕಗಳಲ್ಲಿ ಮಾದಕ ದ್ರವ್ಯ ವಿರೋಧಿ ಸಮಿತಿಗಳ ರಚನೆಯ ಕುರಿತು ಸಭೆ ನಡೆಸಿತು.

ಡಿಐಸಿ ಕೋಲಾರ ಜಂಟಿ ನಿರ್ದೇಶಕಿ ಮಂಜುಳಾ, ಐಎಫ್ಬಿ ಇಂಡಸ್ಟ್ರೀಸ್ ಮತ್ತು ಮಾಲೂರು ಕೈಗಾರಿಕಾ ಪ್ರದೇಶದ ಇತರ ಕೈಗಾರಿಕಾ ಘಟಕಗಳ ಉದ್ಯೋಗಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.