ಮಾಲೂರು (ಕೋಲಾರ): ತಾಲ್ಲೂಕಿನ ಟೇಕಲ್ ಹೋಬಳಿಯ ನಕ್ಕನಹಳ್ಳಿ ಗ್ರಾಮದಲ್ಲಿ ಭಾನುವಾರ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ತಂದೆ ಹಾಗೂ ಗಂಡು ಮಕ್ಕಳಿಬ್ಬರು ನೀರು ಪಾಲಾಗಿದ್ದಾರೆ.

ಕೊಂಡಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಕ್ಕನಹಳ್ಳಿ ಗ್ರಾಮದ ಶ್ರೀನಿವಾಸ್ (45), ಅವರ ಮಕ್ಕಳಾದ ಚೇತನ್ (15) ಹಾಗೂ ರಾಜೇಶ್ (9) ಮೃತರು.

ಕಟಿಂಗ್ ಮಾಡಿಸಿಕೊಂಡಿದ್ದ ಶ್ರೀನಿವಾಸ್, ತಮ್ಮ ಮಕ್ಕಳಿಬ್ಬರನ್ನು ಕರೆದುಕೊಂಡು ಅದೇ ಗ್ರಾಮದ ರೈತ ಬೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡಕ್ಕೆ ಈಜಲು ಹೋಗಿದ್ದಾರೆ. ಮೊದಲು ಮಕ್ಕಳನ್ನು ನೀರಿಗೆ ಇಳಿಸಿದ್ದಾರೆ. ನಂತರ ತಾವು ನೀರಿಗಿಳಿದು ಮಕ್ಕಳಿಗೆ ಈಜು ಕಲಿಸುವಾಗ ಕಾಲು ಜಾರಿ ಹೊಂಡದ ಆಳಕ್ಕೆ ಬಿದ್ದು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವುದು ಎಂದು ಪೊಲೀಸರು ಶಂಕಿಸಿದ್ದಾರೆ. ಶ್ರೀನಿವಾಸ್ ಅವರಿಗೆ ಈಜು ಬರುತ್ತಿರಲಿಲ್ಲ ಎಂಬುದು ಗೊತ್ತಾಗಿದೆ.

ಎಷ್ಟು ಹೊತ್ತಾ ದರೂ ಪತಿ ಹಾಗೂ ಮಕ್ಕಳು ಬರಲಿಲ್ಲವಲ್ಲವೆಂದು ನೋಡಲು ಬಂದಾಗ ನೀರಿನಲ್ಲಿ ಪುತ್ರರ ಶವ ತೇಲುತಿತ್ತು. ತಕ್ಷಣ ಉಳಿದವರಿಗೆ ಮಾಹಿತಿ ನೀಡಿದ್ದಾರೆ. ಶವ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಚೇತನ್ 8 ನೇ ತರಗತಿ ಹಾಗೂ ರಾಜೇಶ್ 4 ನೇ ತರಗತಿ ಓದುತ್ತಿದ್ದರು. ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

ಮಾಸ್ತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರೈತರ ಆಕ್ರೋಶ: ಕೃಷಿ ಇಲಾಖೆಯಿಂದ ರೈತರಿಗೆ ಹೊಂಡ ನಿರ್ಮಾಣ ಮಾಡಿಕೊಡಲು ಸಹಾಯಧನ ನೀಡಲಾಗುತ್ತದೆ. ಆದರೆ, ಹೊಂಡದ ಸುತ್ತಲೂ ಬೇಲಿ ನಿರ್ಮಿಸಿಕೊಂಡು ರಕ್ಷಣೆ ಕಲ್ಪಿಸಲು ಅನುಕೂಲ ಮಾಡಿಕೊಡಬೇಕು. ಕೃಷಿ ಅಧಿಕಾರಿಗಳು ಇದರ ಬಗ್ಗೆ ರೈತರಿಗೆ ಮನವರಿಕೆ ಮಾಡಬೇಕು. ಕೃಷಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಜಿಲ್ಲೆಯಲ್ಲಿ ಪದೇಪದೇ ಸಂಭವಿಸುತ್ತಿವೆ ಎಂದು ರೈತ ಸಂಘದ ಮುಖಂಡರು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-616478224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.