ಮಾಲೂರು: ತಾಲ್ಲೂಕಿನ ಮೇಡಿಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಶಿಕ್ಷಕರು ಅದ್ದೂರಿಯಾಗಿ ಸ್ವಾಗತಿಸಿದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಪಿ.ಕೆಂಪಯ್ಯ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿಯೂ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಶಿಕ್ಷಣ ನೀಡಲಾಗುತ್ತಿದ್ದು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ತಿಳಿಸಿದರು.

ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳ ಪ್ರಾರಂಭೋತ್ಸವವಾಗಿದ್ದು, ರಜೆ ಮುಗಿಸಿ ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಿದ್ದಾರೆ. 11 ಮಂದಿ ವಿದ್ಯಾರ್ಥಿಗಳು ಖಾಸಗಿ ಶಾಲೆ ತೊರೆದು ಸರ್ಕಾರಿ ಶಾಲೆಗಳಿಗೆ ದಾಖಲಾತಿಯಾದರು ಎಂದರು.

ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸಿದ್ದು, ವಿವಿಧ ಸರ್ಕಾರಿ ಶಾಲೆಗಳಲ್ಲಿ ಒಟ್ಟು 230 ವಿದ್ಯಾರ್ಥಿಗಳು ಖಾಸಗಿ ಶಾಲೆ ತೊರೆದು ಸರ್ಕಾರಿ ಶಾಲೆಗಳಲ್ಲಿ ದಾಖಲಾಗಿದ್ದಾರೆ ಎಂದರು.

ಇದೇ ವೇಳೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಸಗಿ ಶಾಲೆ ಬಿಟ್ಟು ಸರ್ಕಾರಿ ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ವಕೀಲ ಮುನಿಯಪ್ಪ ಅವರು ಮಕ್ಕಳಿಗೆ ತಲಾ ಒಂದು ಸಾವಿರ ನೀಡಿದರು.

ಲಕ್ಷ್ಮಮ್ಮ, ರಾಜಪ್ಪ, ಕೃಷ್ಣಪ್ಪ, ಗೋವಿಂದಪ್ಪ, ಚಿಕ್ಕಮನಿಯಪ್ಪ, ಅನ್ಸರ್ ಅಹ್ಮದ್, ಎಂ. ಸುರೇಶ್, ಯಶೋದಮ್ಮ, ಪ್ರಮೀಳಾ, ನವೀನ್, ಅಂಬರೀಶ್, ಮಂಜು, ರಾಜೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-18-1860712873

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.