ಮಾಲೂರು: ಏ.8 ರಿಂದ 12ರವರೆಗೆ ನಗರದಲ್ಲಿ ನಡೆಯಲಿರುವ ಧರ್ಮರಾಯಸ್ವಾಮಿ ದ್ರೌಪದಂಬ ಕರಗ ಮಹೋತ್ಸವ ಹಾಗೂ ಪಟಾಲಮ್ಮ ಮುತ್ಯಾಲಮ್ಮ ಜಾತ್ರೆ ಅಂಗವಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತ ಎಂ.ಎಸ್.ಮಹದೇವ್ ತಿಳಿಸಿದರು.

ನಗರದ ಪಟಾಲಮ್ಮ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಕೈಗೊಂಡಿರುವ ಸ್ವಚ್ಛತಾ ಕಾರ್ಯ ವೀಕ್ಷಿಸಿ ಮಾತನಾಡಿದರು.

ನಗರವು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಅದರಂತೆ ಕುಡಿಯುವ ನೀರು, ಸ್ವಚ್ಛತೆ ಮೂಲ ಸೌಕರ್ಯ ಒದಗಿಸುವುದು ನಗರಸಭೆ ಜವಾಬ್ದಾರಿ. ಜಾತ್ರೆ ಅಂಗವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಸುತ್ತಮುತ್ತಲ ನಾಗರಿಕರು ತಮ್ಮ ಮನೆಗಳಲ್ಲಿ ಸಂಗ್ರಹವಾಗುವ ಕಸವನ್ನು ಜಾತ್ರೆ ನಡೆಯುವ ಆವರಣದಲ್ಲಿ ಹಾಕದೆ ನಗರಸಭೆಯಿಂದ ತಮ್ಮ ಮನೆಗಳ ಬಳಿ ಬರುವ ಸ್ವಚ್ಛತಾ ವಾಹನಗಳಿಗೆ ಕಸ ಹಾಕುವ ಮೂಲಕ ಸ್ವಚ್ಛತೆಯನ್ನು ಕಾಪಾಡಿ ಎಂದು ಹೇಳಿದರು.

ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸ್, ಕಿರಿಯ ಆರೋಗ್ಯ ನಿರೀಕ್ಷಕ ರಾಜಣ್ಣ, ಸಿಬ್ಬಂದಿ ಶ್ರೀನಿವಾಸ್ ಸೇರಿದಂತೆ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-18-186116472

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.