ಕೋಲಾರ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಮಹತ್ವಾಕಾಂಕ್ಷೆಯ ‘ಜ್ಞಾನ ಭಾರತಮ್’ ಮಿಷನ್ ಯೋಜನೆಯಡಿ ಜಿಲ್ಲೆಯಾದ್ಯಂತ ಇರುವ ಅಮೂಲ್ಯ ಹಸ್ತಪ್ರತಿಗಳನ್ನು ಗುರುತಿಸಿ, ಸಂರಕ್ಷಿಸಿ ಹಾಗೂ ಡಿಜಿಟಲೀಕರಣಗೊಳಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಚಾಲನೆ ನೀಡಿದೆ.

ಜಿಲ್ಲಾಡಳಿತ ಭವನದ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಗುರುವಾರ ಈ ಸಂಬಂಧ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿಯ ಪೂರ್ವಭಾವಿ ಸಭೆ ನಡೆಯಿತು.

ಜಿಲ್ಲೆಯ ವಿವಿಧ ಮಠಗಳು, ಮಂದಿರಗಳು, ಮಸೀದಿಗಳು ಹಾಗೂ ಹಳೆಯ ಮನೆಗಳಲ್ಲಿ ಇರುವ ತಾಳೆಗರಿ ಮತ್ತು ಕಾಗದದ ರೂಪದ ಹಸ್ತಪ್ರತಿಗಳನ್ನು ಸಮೀಕ್ಷೆ ನಡೆಸಿ ಪಟ್ಟಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಹಾಗೂ ಇತರೆ ದಾಖಲೆಗಳ ಸಮಗ್ರ ಸಮೀಕ್ಷೆ ಮಾಡಲಾಗುತ್ತದೆ. ಅವುಗಳನ್ನು ತಂತ್ರಜ್ಞಾನ ಬಳಸಿ ಶಾಶ್ವತವಾಗಿ ಸಂರಕ್ಷಿಸಲಾಗುತ್ತದೆ. ಡಿಜಿಟಲೀಕರಣಗೊಳಿಸುವುದಲ್ಲದೇ; ನೋಂದಣಿ, ವಿಮರ್ಶಾತ್ಮಕ ಸಂಪಾದನೆ, ಅನುದಾನ ಹಾಗೂ ಪ್ರಕಟಣೆ ಕಾರ್ಯ ಕೈಗೊಳ್ಳಲಾಗುತ್ತದೆ.

ಎಸ್.ಎಂ.ಮಂಗಳಾ ಮಾತನಾಡಿ, ವಿಶೇಷವಾಗಿ 100 ವರ್ಷಗಳಿಗಿಂತ ಹಳೆಯದಾದ ಹಸ್ತಪ್ರತಿಗಳನ್ನು ಆದ್ಯತೆಯ ಮೇರೆಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಾರ್ವಜನಿಕರಲ್ಲಿ ಇರುವ ಹಸ್ತಪ್ರತಿಗಳನ್ನು ಸರ್ಕಾರ ಕಸಿದುಕೊಳ್ಳುತ್ತದೆ ಎಂಬ ಆತಂಕ ಬೇಡ ಎಂದು ಸ್ಪಷ್ಟಪಡಿಸಿದ ಅವರು, ಮಾಲೀಕರ ಅನುಮತಿಯೊಂದಿಗೆ ಮಾತ್ರ ಅವುಗಳನ್ನು ಡಿಜಿಟಲೀಕರಣಗೊಳಿಸಿ ಮೂಲ ಪ್ರತಿಯನ್ನು ಅವರ ಬಳಿಯೇ ಉಳಿಸಲಾಗುವುದು ಎಂದರು.

ಉಳಿದಂತೆ ಹಸ್ತಪ್ರತಿಗಳ ಮಾಹಿತಿಗಾಗಿ ವಿಶೇಷ ಪೋಸ್ಟರ್ಗಳು ಮತ್ತು ಡಿಜಿಟಲ್ ಬ್ರೋಷರ್ಗಳನ್ನು ಸಿದ್ಧಪಡಿಸಿ ಪ್ರಚಾರ ಮಾಡುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾಗೃತಿ ಮೂಡಿಸುವುದು. ಸಂಪರ್ಕಕ್ಕಾಗಿ ಜಿಲ್ಲಾ ಸಮನ್ವಯಾಧಿಕಾರಿಗಳ ಮೊಬೈಲ್ ಸಂಖ್ಯೆಗಳನ್ನು ಸಾರ್ವಜನಿಕರಿಗೆ ಒದಗಿಸುವುದು. ಮೇ ಅಂತ್ಯದೊಳಗೆ ಪ್ರಾಥಮಿಕ ಹಂತದ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸುವುದು ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಯಿತು.

ಹಸ್ತಪ್ರತಿಗಳು ಕೇವಲ ಹಳೆಯ ಕಾಗದಗಳಾಗದೇ ಭಾರತೀಯ ಸಾಂಸ್ಕೃತಿಕ ಪರಂಪರೆಯ ಹುಟ್ಟು ಹಾಗೂ ಅದರ ಬೆಳವಣಿಗೆ ಮತ್ತು ಸಂಸ್ಕೃತಿಯ ಪರಿಯನ್ನು ಎತ್ತಿ ತೋರಿಸುತ್ತವೆ. ಹೀಗಾಗಿ, ಹಸ್ತಪ್ರತಿಗಳನ್ನು ಆಧುನಿಕ ತಂತ್ರಜ್ಞಾನಗಳೊಂದಿಗೆ ಬೆಸೆದು ಮುಂದಿನ ಪೀಳಿಗೆಗೆ ಪುರಾತನ ಯುಗದ ದರ್ಶನ ಮಾಡಿಸುವ ಪ್ರಮುಖ ಯೋಜನೆ ಇದಾಗಿದೆ.

ಈ ಮಹತ್ವದ ಜ್ಞಾನ ಭಾರತ ಮಿಷನ್ ಯೋಜನೆಯನ್ನು ರಾಜ್ಯದಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರ ನಿರ್ದೇಶನ ನೀಡಿದೆ. ಇದರ ಭಾಗವಾಗಿ ಜಿಲ್ಲೆಯಲ್ಲಿ ಹಸ್ತಪ್ರತಿಗಳ ಸಮಗ್ರ ಸರ್ವೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳುವ ಉದ್ದೇಶ ಹೊಂದಲಾಗಿದೆ.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ವೆಂಕಟಾಚಲಪತಿ, ಜ್ಞಾನ ಭಾರತಮ್ ಸಂಯೋಜಕರು ಎಚ್.ಎಸ್.ಶ್ಯಾಮಾಚಾರ, ಇತಿಹಾಸ ತಜ್ಞ ಅರಿವು ಶಿವಪ್ಪ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ತುಕರಾಮ ಎನ್.ಪವಾರ್, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿಷಯ ತಜ್ಞ ವಿ.ಶಿವಶಂಕರ ಶಾಸ್ತ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-18-311850348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.