ಮಾಲೂರು: ಸಾಹಿತಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಜಯಂತಿಯನ್ನು ಜೂನ್ 6ರಂದು ಮಾಸ್ತಿ ಗ್ರಾಮದ ಗ್ರಂಥಾಲಯ ಸ್ಮಾರಕದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಸರಳವಾಗಿ ಆಚರರಿಸಲಾಗುವುದು ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ನಗರದ ತಾಲ್ಲೂಕು ಕಚೇರಿಯ ಶಾಸಕರ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಜನ್ಮದಿನದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಜಯಂತಿಯನ್ನು ಮಾಸ್ತಿ ಗ್ರಾಮದಲ್ಲಿ ಪ್ರತಿವರ್ಷ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು. ಪ್ರಸಕ್ತ ವರ್ಷ ಜೂನ್ 8ರಂದು ತಾಲ್ಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವುದರಿಂದ ಮಾಸ್ತಿ ಗ್ರಾಮದಲ್ಲಿ ಜೂನ್ 6ರಂದು ಸರಳವಾಗಿ ಆಚರಣೆ ಮಾಡಲಾಗುವುದು. ನಂತರ ಮಾಲೂರು ನಗರದಲ್ಲಿ ಜೂನ್ 8ರಂದು ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದರು.

ಮಾಸ್ತಿಯಲ್ಲಿ ದ್ವಿಪಥ ರಸ್ತೆ ಹಾಗೂ ಮಾಸ್ತಿ ವೃತ್ತವನ್ನು ಅಭಿವೃದ್ಧಿಪಡಿಸಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಪ್ರತಿಮೆ ಅನಾವರಣ ಮಾಡಲಾಗುವುದು ಎಂದರು.

ತಹಶೀಲ್ದಾರ್ ಎಂ.ವಿ.ರೂಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಜಯನರಸಿಂಹ, ವಿ.ಮುನೇಗೌಡ, ಹನುಮಂತಯ್ಯ, ಆಂಜಿನಪ್ಪ, ರಾಮಮೂರ್ತಿ, ಗೋವಿಂದೇಗೌಡ, ಶಿವಕುಮಾರ್, ದಿವ್ಯ, ಪೆದ್ದಣ್ಣ, ಜಬಿವುಲ್ಲಾ, ಕೃಷ್ಣ, ರಂಜು ಮೌಳಿ, ಅನ್ಸರ್ ಭಾಷಾ, ವೀಣಾ, ಅಶ್ವಥ್ರೆಡ್ಡಿ, ಅಕ್ರಂಪಾಷಾ, ಎ.ಕೆ.ವೆಂಕಟೇಶ್, ಸಂತೋಷ್, ಎಸ್.ಎಂ.ವೆಂಕಟೇಶ್, ನಾಗೇಶ್, ಜಮುಚಂದ್ರ, ಮುನಿಕೃಷ್ಣಪ್ಪ, ನವೀನ್, ಶ್ರೀನಾಥ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-18-649547865

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.