ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಸೋಮವಾರ ನಗರದ ತಮ್ಮ ಕಚೇರಿಯಲ್ಲಿ ಕ್ಷೇತ್ರದ ಸಾರ್ವಜನಿಕರ ಅಹವಾಲು ಆಲಿಸಿದರು. ಸ್ಥಳದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ, ಸಮಸ್ಯೆ ಬಗೆಹರಿಸಲು ಸೂಚಿಸಿದರು. ಇನ್ನೂ ಕೆಲವರಿಗೆ ಸ್ಥಳ ಪರಿಶೀಲನೆ ನಡೆಸಿ ಅಭಿವೃದ್ಧಿ ಕಾಮಗಾರಿ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ವಿವಿಧ ಭಾಗಗಳಿಂದ ಬಂದಿದ್ದ ಕ್ಷೇತ್ರದ ನಾಗರಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಶಾಸಕರ ಗಮನಕ್ಕೆ ತಂದರು. ಪ್ರಮುಖವಾಗಿ ನೀರು, ರಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ವಿದ್ಯುತ್ ಸಮಸ್ಯೆಗಳು ಸೇರಿದಂತೆ ವಿವಿಧ ಮೂಲ ಸೌಲಭ್ಯಗಳ ಕುರಿತ ಅಹವಾಲು ಸಲ್ಲಿಸಿದರು.

ಕೆಲವು ನಾಗರಿಕರು ತಮ್ಮ ವೈಯಕ್ತಿಕ ಸಮಸ್ಯೆಗಳಾದ ಪಿಂಚಣಿ, ಭೂಮಿ ದಾಖಲೆ, ಮನೆ ನಿರ್ಮಾಣ ಅನುಮತಿ ಸೇರಿದಂತೆ ವಿವಿಧ ಆಡಳಿತಾತ್ಮಕ ವಿಚಾರಗಳನ್ನೂ ಶಾಸಕರ ಮುಂದೆ ಮಂಡಿಸಿದರು.

ಪ್ರತಿ ಅಹವಾಲನ್ನು ಶಾಸಕರು ಆಲಿಸಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಸಾರ್ವಜನಿಕರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಜನರೊಂದಿಗೆ ನೇರ ಸಂಪರ್ಕದಲ್ಲಿದ್ದು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವುದು ತಮ್ಮ ಕರ್ತವ್ಯ ಎಂದರು.

ವಿದ್ಯಾಭ್ಯಾಸದ ಸಹಾಯಕ್ಕಾಗಿ ಮನವಿ ಸಲ್ಲಿಸಿದವರಿಗೆ ತಮ್ಮ ಸ್ವಂತ ಹಾಗೂ ಶಾಸಕರ ಸಂಬಳದ ಹಣವನ್ನು ಚೆಕ್ ಮೂಲಕ ನೀಡಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು, ಸಾರ್ವಜನಿಕರ ಅಹವಾಲುಗಳನ್ನು ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲು ಸಹಕರಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-18-1793519104

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.