ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕವನ್ನು ನನ್ನ ಹೆಸರಿಗೆ ಬರೆದು ಕೊಟ್ಟರೆ ಹೋಗುತ್ತೇನೆ‌: ಕೊತ್ತೂರು ಮಂಜುನಾಥ್

Published 1 ನವೆಂಬರ್ 2023, 21:19 IST
Last Updated 1 ನವೆಂಬರ್ 2023, 21:19 IST
ಅಕ್ಷರ ಗಾತ್ರ

ಕೋಲಾರ: ‘ನನ್ನ ಖರೀದಿಸುವ ಶಕ್ತಿ ಕರ್ನಾಟಕದಲ್ಲಿ ಯಾರಿಗೂ ಇಲ್ಲ. ನನ್ನ ರೇಟ್ ಬೇರೆ ಇದೆ. ಕರ್ನಾಟಕ ರಾಜ್ಯವನ್ನು ನನ್ನ ಹೆಸರಿಗೆ ಬರೆದು ಕೊಟ್ಟರೆ ಹೋಗುತ್ತೇನೆ‌. ಆದರೆ, ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಸರ್ಕಾರ ಬೀಳಿಸುವ ಕನಸು ಯಾರೂ ಕಾಣಬೇಡಿ’ ಎಂದು ಕೋಲಾರ ಶಾಸಕ ಕಾಂಗ್ರೆಸ್‌ನ ಕೊತ್ತೂರು ಮಂಜುನಾಥ್, ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್‌ನಲ್ಲಿ 135 ಶಾಸಕರು ಇದ್ದೇವೆ. ಸರ್ಕಾರ ಬೀಳಿಸಲು ಸಾಧ್ಯವಿಲ್ಲ’ ಎಂದರು.

‘ಕಾಂಗ್ರೆಸ್‌ ಶಾಸಕ ರವಿ ಗಣಿಗ ಅವರಿಗೆ ಯಾರಾದರೂ ಹಣ ನೀಡಲು ಮುಂದೆ ಬಂದಿದ್ದಾರೋ ಏನೋ ನನಗೆ ಗೊತ್ತಿಲ್ಲ. ಅವರ ಹೇಳಿಕೆಯನ್ನು ನಾನೂ ಗಮನಿಸಿದ್ದೇನೆ’ ಎಂದರು. ‘ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬುದು ಸುಳ್ಳು. ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ’ ಎಂದು ತಿಳಿಸಿದರು.

‘ಕೋಲಾರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಿದ್ಧವಾಗಿದ್ದಾರೆ. ಅವರು ಸ್ಥಳೀಯರೇ ಆಗಿದ್ದು, ಈಗಲೇ ಹೆಸರು ಬಹಿರಂಗಪಡಿಸುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT