ಕೋಲಾರ: ಉಪವಿಭಾಗಾಧಿಕಾರಿಗಳ ಆದೇಶದನುಸಾರ ಮುಳಬಾಗಿಲು ತಾಲ್ಲೂಕಿನ ಕಸಬಾ ಹೋಬಳಿ ಮುಳಬಾಗಿಲು ರೂರಲ್ ಗ್ರಾಮದ ಸರ್ವೆ ಸಂಖ್ಯೆ 592 ರಲ್ಲಿ 10.08 ಗುಂಟೆ ವಿಸ್ತೀರ್ಣದ ಬೊಗ್ಗಲನಾಥನ್ ಕೆರೆ ಜಮೀನಿನ ಒತ್ತುವರಿಯನ್ನು ತೆರವುಗೊಳಿಸಲು ಮೇ 22 ರಂದು ಬೆಳಿಗ್ಗೆ 6 ಗಂಟೆಗೆ ದಿನಾಂಕ ನಿಗದಿಪಡಿಸಲಾಗಿರುತ್ತದೆ ಎಂದು ತಾಲ್ಲೂಕು ಆಡಳಿತ ತಿಳಿಸಿದೆ.

ಮುಳಬಾಗಿಲು ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಕೆರೆಗಳ ಅಳತೆ ಮಾಡಿ, ಒತ್ತುವರಿ ತೆರವುಗೊಳಿಸಿ ವರದಿ ಸಲ್ಲಿಸಲು ನಿರ್ದೇಶನ ನೀಡಿರುವ ಕಾರಣ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ.

ಹಲವಾರು ಬಾರಿ ನೋಟಿಸ್ ನೀಡಲಾಗಿದ್ದು, ಒತ್ತುವರಿದಾರರು ಯಾವುದೇ ದಾಖಲೆಗಳನ್ನು ಈವರೆಗೆ ಸಲ್ಲಿಸಿರುವುದಿಲ್ಲ. ಈ ಕೆರೆಯ ಜಮೀನನ್ನು ಒತ್ತುವರಿ ಮಾಡಿ ಮನೆ ಹಾಗೂ ಇತರೆ ಕಟ್ಟಡಗಳ ನಿರ್ಮಾಣ ಕೈಗೊಂಡಿರುವುದು ಕಂಡುಬಂದಿರುವ ಮೇರೆಗೆ ಒತ್ತುವರಿಯನ್ನು ತೆರವುಗೊಳಿಸಲು ಕೋರಿ ಹೈಕೋರ್ಟ್ ಆದೇಶಾನುಸಾರ ಭೂ ಕಂದಾಯ ಕಲಂ-1964 ರ ಕಲಂ-67 ರಂತೆ ಪ್ರಸ್ತಾವನೆ ಸಲ್ಲಿಸಿಕೊಳ್ಳಲಾಗಿರುತ್ತದೆ.

ಒತ್ತುವರಿದಾರರು ಬೆಲೆಬಾಳುವ ವಸ್ತುಗಳನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಿಕೊಳ್ಳಲು ಹಾಗೂ ಸ್ವಯಂ ಪ್ರೇರಿತವಾಗಿ ಒತ್ತುವರಿಯನ್ನು ತೆರವುಗೊಳಿಸಿ ಸರ್ಕಾರ ಆಸ್ತಿಯನ್ನು ರಕ್ಷಿಸಲು ತಿಳಿಸಿದೆ. ತಪ್ಪಿದ್ದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯಂದು ಉಂಟಾಗುವ ನಷ್ಟಗಳಿಗೆ ಒತ್ತುವರಿದಾರೇ ನೇರ ಹೊಣೆಗಾರರಾಗಿರುತ್ತಾರೆ. ಇದಕ್ಕೆ ತಾಲ್ಲೂಕು ಆಡಳಿತವು ಯಾವುದೇ ರೀತಿಯಿಂದಲೂ ಹೊಣೆಯಾಗುವುದಿಲ್ಲ ಎಂದೂ ಮುಳಬಾಗಿಲು ತಾಲ್ಲೂಕಿನ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-18-214203864

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.