ಮುಳಬಾಗಿಲು: ತಾಲ್ಲೂಕಿನ ತಾಯಲೂರು ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಶಾಸಕ ಸಮೃದ್ಧಿ ಮಂಜುನಾಥ್ ನೇತೃತ್ವದಲ್ಲಿ ‘ನಮ್ಮ ನಡಿಗೆ ಗ್ರಾಮ ಪಂಚಾಯಿತಿಗಳ ಕಡೆಗೆ’ ಕಾರ್ಯಕ್ರಮ ನಡೆಯಿತು.

ತಾಯಲೂರು ಗ್ರಾಮ ಪಂಚಾಯಿತಿಯಲ್ಲಿ ಶಾಸಕರು 78 ದೂರುಗಳನ್ನು ಸ್ವೀಕರಿಸಿದರು. ಅವುಗಳಲ್ಲಲಿ 56 ದೂರುಗಳು ತಾಯಲೂರು ಪಿಡಿಒ ಶ್ರೀನಿವಾಸ ರೆಡ್ಡಿ ವಿರುದ್ಧ ಅನೇಕ ಕಾನೂನು ಬಾಹಿರ ಕ್ರಮಗಳನ್ನು ಕೈಗೊಂಡಿದ್ದಾರೆಂದು ನೀಡಿದ್ದರು. ಇದರಿಂದ ರೊಚ್ಚಿಗೆದ್ದ ಶಾಸಕ ಸಮೃದ್ಧಿ ಮಂಜುನಾಥ್ ಪಿಡಿಒ ಅವರನ್ನು ಸಾರ್ವಜನಿಕರು ಹಾಗೂ ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳ ಮುಂದೆಯೇ ತರಾಟೆಗೆ ತೆಗೆದುಕೊಂಡರು.

ಕೂಡಲೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭ್ರಷ್ಟ ಪಿಡಿಒ ಶ್ರೀನಿವಾಸ ರೆಡ್ಡಿ ಅವರನ್ನು ತಾಲ್ಲೂಕಿನಿಂದ ಬೇರೆಡೆಗೆ ವರ್ಗಾಯಿಸಬೇಕು. ಇಲ್ಲವಾದಲ್ಲಿ ಪಂಚಾಯಿತಿ ಕಚೇರಿಯ ಮುಂದೆಯೇ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶಾಸಕ ಸಮೃದ್ಧಿ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ತಹಶೀಲ್ದಾರ್ ವಿ.ಗೀತಾ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಎನ್.ವಿ.ಬಾಬು ಸೇರಿದಂತೆ ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-18-1242881240

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.