ಮುಳಬಾಗಿಲು (ಕೋಲಾರ): ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾದ ಖುಷಿಯಲ್ಲಿ ಗುರುವಾರ ಮಧ್ಯಾಹ್ನ ತಾಲ್ಲೂಕಿನ ಸೊಣ್ಣವಾಡಿ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ವಿದ್ಯಾರ್ಥಿ ಬಾವಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಸೊಣ್ಣವಾಡಿ ಗ್ರಾಮದ ರಘುಪತಿ ಎಂಬುವರ ಪುತ್ರ ಕಿರಣ್ (15) ಮೃತ ವಿದ್ಯಾರ್ಥಿ. ಎಸ್ಎಸ್ಎಲ್ಸಿಯಲ್ಲಿ 625ಕ್ಕೆ 239 ಅಂಕಗಳನ್ನು ಪಡೆದು ಉತ್ತೀರ್ಣನಾಗಿದ್ದ. ಅದೇ ಖುಷಿಯಲ್ಲಿ ಗ್ರಾಮದ ಏಳು ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಎಂದು ಪೊಲೀಸರು ತಿಳಿಸಿ ದ್ದಾರೆ. ಗ್ರಾಮದ ಶಿವರಾಜ್ ಎಂಬುವವರಿಗೆ ಸೇರಿದ ಸುಮಾರು 30 ಅಡಿ ಆಳದ ಬಾವಿ ಅದು. ಕಿರಣ್ಗೆ ಸರಿಯಾಗಿ ಈಜು ಬರುತ್ತಿರಲಿಲ್ಲ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-51-976441749

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.