ಮುಳಬಾಗಿಲು: ತಾಲ್ಲೂಕು ಬಹುಜನ ಸಂಘಟನೆಗಳ ಒಕ್ಕೂಟ, ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಸಂಘ, ತಾಲ್ಲೂಕು ಕೂಲಿ ಕಾರ್ಮಿಕರ ಸಂಘ ಹಾಗೂ ದಲಿತಪರ ಸಂಘಟನೆಗಳ ವತಿಯಿಂದ ನಗರದ ನೇತಾಜಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ವಿಶ್ವ ಕಾರ್ಮಿಕರ ದಿನಾಚರಣೆ ನಡೆಯಿತು.

ಈ ವೇಳೆ ತಾಲ್ಲೂಕಿನಲ್ಲಿ ಹಿರಿಯ ಕಾರ್ಮಿಕರನ್ನು ಹಾಗೂ ಕೂಲಿಕರನ್ನು ಸತ್ಕರಿಸಲಾಯಿತು.

ಬಹುಜನ ಸಂಘಟನೆಗಳ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಸಂಗಸಂದ್ರ ವಿಜಯ್ ಕುಮಾರ್ ಮಾತನಾಡಿ, ಕಾರ್ಮಿಕರು ದೇಶದ ಆರ್ಥಿಕತೆಯ ಬೆನ್ನೆಲುಬು. ಅವರ ದುಡಿಮೆಗೆ ತಕ್ಕಂತೆ ಸರ್ಕಾರಗಳು ಕನಿಷ್ಠ ವೇತನ ನೀಡಬೇಕು. ಯಾವುದೇ ಕಾರಣಕ್ಕೂ ಹೆಚ್ಚು ಕೆಲಸಕ್ಕೆ ಕಡಿಮೆ ವೇತನ ನೀಡುವುದು ಸರಿಯಲ್ಲ ಎಂದು ಹೇಳಿದರು.

ಕಾರ್ಮಿಕರ ಕಲ್ಯಾಣಕ್ಕಾಗಿ ದೇಶದಲ್ಲಿ ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಲೇ ಬರುತ್ತಿವೆ. ಹಾಗಿದ್ದರೂ ಕಾರ್ಮಿಕರಿಗೆ ಸರ್ಕಾರಗಳು ಪೂರ್ಣ ಪ್ರಮಾಣದ ಸೌಲಭ್ಯಗಳನ್ನು ನೀಡದೆ ಇರುವುದು ಬೇಸರದ ವಿಚಾರ ಎಂದರು.

ದರಖಾಸ್ತು ಸಮಿತಿ ಸದಸ್ಯ ಜಮ್ಮನಹಳ್ಳಿ ಕೃಷ್ಣಪ್ಪ ಮಾತನಾಡಿ, ಕಾರ್ಮಿಕರಿಲ್ಲದೆ ದೇಶದ ಆರ್ಥಿಕ ಸ್ಥಿತಿ ಹೆಚ್ಚಳವಾಗಲು ಸಾಧ್ಯವಿಲ್ಲ. ಹಾಗಾಗಿ ಅಪಾಯದ ಸ್ಥಳಗಳಲ್ಲಿ ದುಡಿಯುವ ಹಾಗೂ ಇತರೆ ಕಾರ್ಮಿಕರಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿ ಮಾಡಿ ಕಾರ್ಮಿಕರ ಪರ ನಿಲ್ಲಬೇಕೆಂದು ಹೇಳಿದರು.

ಕಾರ್ಮಿಕ ಇಲಾಖೆ ನಿರೀಕ್ಷಕಿ ಆಶಾ ರಾಣಿ, ಜಮ್ಮನಹಳ್ಳಿ ಕೃಷ್ಣಪ್ಪ, ಶಾಮಣ್ಣ, ಸರಸಮ್ಮ, ನಾಗವೇಣಮ್ಮ, ಸೋಮಶೇಖರ್, ಎಲ್ಲೇಶ್, ವೆಂಕಟರವಣಪ್ಪ, ಚೌಡಪ್ಪ, ಗೋಪಾಲ್, ಖಲೀಲ್ ಅಪ್ಸರ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-18-559792012

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.